ಚೋಟಾ ರಾಜನ್ ಸೇರಿ ನಾಲ್ವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಭೂಗತ ಪಾತಕಿ ಚೋಟಾ ರಾಜನ್ ಸೇರಿ ನಾಲ್ವರು ಅಧಿಕಾರಿಗಳ ವಿರುದ್ಧ ಸಿಬಿಐ ಅಧಿಕಾರಿಗಳು ಮಂಗಳವಾರ ಮೊದಲ ಜಾರ್ಜ್ ಶೀಟ್ ನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ...
ನವದೆಹಲಿ: ಭೂಗತ ಪಾತಕಿ ಚೋಟಾ ರಾಜನ್ ಸೇರಿ ನಾಲ್ವರು ಅಧಿಕಾರಿಗಳ ವಿರುದ್ಧ ಸಿಬಿಐ ಅಧಿಕಾರಿಗಳು ಮಂಗಳವಾರ ಮೊದಲ ಜಾರ್ಜ್ ಶೀಟ್ ನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಪಾತಕಿ ಚೋಟಾ ರಾಜನ್ ವಿದೇಶಕ್ಕೆ ತೆರಳಲು ಮೂವರು ಅಧಿಕಾರಿಗಳು ಸಹಾಯ ಮಾಡಿದ್ದು, ವಿದೇಶಕ್ಕೆ ಹಾರಲು ಪಾಸ್ ಪೋರ್ಟ್ ಗಾಗಿ ನಕಲಿ ದಾಖಲೆಗಳನ್ನು ಸಲ್ಲಿಸಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ಸಿಬಿಐ ಹೇಳಿದೆ.
ಜಯ್ ಶ್ರೀ ರಹತೆ, ದೀಪಕ್ ನಟ್ವರ್ಲಾಲ್ ಮತ್ತು ಲಲಿತಾ ಲಯಾಮನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಚಾರ್ಜ್ ಶೀಟ್ ಕುರಿತಂತೆ ಮಾಹಿತಿ ನೀಡಿರುವ ಅಧಿಕಾರಿ, ಆರ್.ಕೆ.ಗೌರ್ ಅವರು, ಚೋಟಾ ರಾಜನ್ ಮತ್ತು ಮೂವರು ಅಧಿಕಾರಿಗಳ ವಿರುದ್ಧ ಈಗಾಗಲೇ ವಿಶೇಷ ನ್ಯಾಯಾಲಯದಲ್ಲಿ ಜಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.