ಬಿ.ಎಸ್.ಬಸ್ಸಿ 
ದೇಶ

ದೆಹಲಿ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗದಿಂದ ಸಮನ್ಸ್

ದೆಹಲಿಯಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧಗಳ ಕುರಿತು ಮಾಹಿತಿ ಒದಗಿಸದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ...

ನವದೆಹಲಿ: ದೆಹಲಿಯಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧಗಳ ಕುರಿತು ಮಾಹಿತಿ ಒದಗಿಸದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ಆಯುಕ್ತರಿಗೆ ಸಮನ್ಸ್ ಜಾರಿ ಮಾಡಿರುವ ದೆಹಲಿ ಮಹಿಳಾ ಆಯೋಗ, ಮುಂದಿನ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ದೆಹಲಿ ಮಹಿಳಾ ಆಯೋಗ ನ್ಯಾಯಾಂಗ ಅಧಿಕಾರವನ್ನು ಹೊಂದಿದ್ದು, ಫೆಬ್ರವರಿ 8 ರಂದು ದೆಹಲಿ ಮಹಿಳಾ ಆಯೋಗದ ಮುಂದೆ ಹಾಜರಾಗಿ ಮಾಹಿತಿ ಒದಗಿಸದಿರುವ ಸಂಬಂಧ ವಿವರಣೆ ನೀಡುವಂತೆ ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ದೆಹಲಿ ಪೊಲೀಸ್ ಕಮಿಷನರ್​ಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ನೀಡುವಂತೆ ಕೇಳಲಾಗಿತ್ತು. ಈ ಸಂಬಂಧ ಸಾಕಷ್ಟು ಬಾರಿ ಪತ್ರ ಸಹ ಬರೆಯಲಾಗಿತ್ತು. ಆದರೆ ದೆಹಲಿ ಪೊಲೀಸರು ಮಹತ್ವದ ಮಾಹಿತಿ ನೀಡಲಿಲ್ಲ. 
ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆಗಾಗಿ ಯೋಜನೆ ರೂಪಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬಸ್ಸಿ ಅವರಿಗೆ ಸಮನ್ಸ್ ನೀಡಿದ್ದೇವೆ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲೀವಲ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ