ಕೃಷಿ ಉತ್ಪಾದನೆ ಕುಂಟಿತ, ಆಹಾರ ಉತ್ಪನ್ನಗಳ ಆಮದು ಏರಿಕೆ 
ದೇಶ

ಕೃಷಿ ಉತ್ಪಾದನೆ ಕುಂಟಿತ, ಆಹಾರ ಉತ್ಪನ್ನಗಳ ಆಮದು ಏರಿಕೆ

ಕೃಷಿ ಉತ್ಪಾದನೆ ಕುಂಟಿತವಾಗಿದ್ದು ಭಾರತ ಶೀಘ್ರವೆ ಹಲವು ಆಹಾರ ಉತ್ಪನ್ನಗಳ ಅಮದುದಾರನಾಗುವ ಸಾಧ್ಯತೆ ಇದೆ.

ನವದೆಹಲಿ: ಕೃಷಿ ಉತ್ಪಾದನೆ ಕುಂಟಿತವಾಗಿದ್ದು ಭಾರತ ಶೀಘ್ರವೆ ಹಲವು ಆಹಾರ ಉತ್ಪನ್ನಗಳ ಅಮದುದಾರನಾಗುವ ಸಾಧ್ಯತೆ ಇದೆ.  ಕುಸಿತ ಕಂಡಿರುವ ಕೃಷಿ ಉತ್ಪಾನೆಯನ್ನು ಸುಧಾರಿಸಿ ಬೆಲೆ ಏರಿಕೆಯನ್ನು ತಡೆಗಟ್ಟುವುದಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಹಾರ ಮತ್ತು ಕೃಷಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮುಂದಿನ ವರ್ಷದಿಂದ ಭಾರತ ಪ್ರಮುಖ ಆಹಾರ ಪದಾರ್ಥಗಳನ್ನು ಆಮದು ಮಾಡಿಕೊಳ್ಳಬೇಕಾಗುತ್ತದೆ ಎಂದು ವರ್ತಕರು ಎಚ್ಚರಿಕೆ ನೀಡಿದ್ದಾರೆ. ನಿರಂತರವಾಗಿ ಎದುರಾದ ಬಲಗಾಲ, ಕೃಷಿ ಕ್ಷೇತ್ರದ ಮೇಲೆ ದೀರ್ಘಾವಧಿಯ ಬಂಡವಾಳ ಹೂಡಿಕೆಯ ಕೊರತೆ  ಹಾಗೂ ಬೆಳವಣಿಗೆಯಾಗುತ್ತಿರುವ ಜನಸಂಖ್ಯೆಯ ಬೆಡಿಕೆ ಭಾರತ ದೇಶ ಆಹಾರ ಪದಾರ್ಥಗಳ ವಿಷಯದಲ್ಲಿ ಸ್ವಾವಲಂಬಿಯಾಗುವುದಕ್ಕೆ ಸವಾಲಾಗಿದೆ.
ಕೃಷಿ ಉತ್ಪಾದನೆ ಕುಟುಂಟಿತವಾಗಿರುವುದು ದೇಶದ ಆರ್ಥಿಕ ಬೆಳವಣಿಗೆಗೂ ಪ್ರತಿಕೂಲ ಪರಿಣಾಮ ಬೀರಲಿದ್ದು, ಕೃಷಿ ಉತ್ಪಾದನೆ ಏರಿಕೆ ಮಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಕೆಲವೊಂದು ಗಂಭೀರವಾದ ಸಲಹೆ ನೀಡಿದ್ದು ಆಹಾರ ಉತ್ಪನ್ನಗಳ ಸರಬರಾಜು ಹಾಗೂ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳುವಂತೆ ಕೃಷಿ ವಲಯಕ್ಕೆ ಸಂಬಂಧಿಸಿದ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಭಾರತ 16 ವರ್ಷಗಳಲ್ಲೇ ಮೊದಲ ಬಾರಿಗೆ ಹೊರಗಿನಿಂದ ಜೋಳ ಖರೀದಿಸಿದೆ, ಇನ್ನು ಉಳಿದ ಪ್ರಮುಖ ಆಹಾರ ಉತ್ಪನ್ನಗಳನ್ನೂ ಶೀಘ್ರವೇ ಆಮದು ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಲಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?