ಮುಸ್ಲಿಂ ಸಮುದಾಯದ ಪ್ರಮುಖ ನಾಯಕರ ಜತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 
ದೇಶ

ಇಸಿಸ್ ಅಪಾಯದ ಬಗ್ಗೆ ತಿಳಿಹೇಳಿ: ಮುಸ್ಲಿಂ ನಾಯಕರಿಗೆ ಕೇಂದ್ರ ಸರ್ಕಾರ ಮನವಿ

ದೇಶದ ಮುಸ್ಲಿಂ ಯುವಕರು ಇಸಿಸ್ ನಂತಹ ಉಗ್ರ ಸಂಘಟನೆಯತ್ತ ಆಕರ್ಷಣೆಗೆ ಒಳಗಾಗದೇ ಇರಲು ಮುಸ್ಲಿಂ ಧರ್ಮ...

ನವದೆಹಲಿ: ದೇಶದ ಮುಸ್ಲಿಂ ಯುವಕರು ಇಸಿಸ್ ನಂತಹ ಉಗ್ರ ಸಂಘಟನೆಯತ್ತ ಆಕರ್ಷಣೆಗೆ ಒಳಗಾಗದೇ ಇರಲು ಮುಸ್ಲಿಂ ಧರ್ಮ ಗುರುಗಳು ತಿಳಿಹೇಳಬೇಕೆಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮನವಿ ಮಾಡಿಕೊಂಡಿದ್ದಾರೆ. 
ಭಾರತದ ಹಲವಾರು ರಾಜ್ಯಗಳಿಂದ ಮುಸ್ಲಿಂ ಯುವಕರು ಉಗ್ರ ಸಂಘಟನೆ ಐಎಸ್ ನತ್ತ ಆಕರ್ಷಣೆಗೆ ಒಳಗಾಗುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ಮಂಗಳವಾರ ಮುಸ್ಲಿಂ ಸಮುದಾಯದ ಪ್ರಮುಖ ನಾಯಕರ ಜತೆ ಚರ್ಚೆ ನಡೆಸಿತು.
ಧಾರ್ಮಿಕ ನಾಯಕರ ಜೊತೆಗೆ ರಾಜಕಾರಣಿಗಳೂ ಕೂಡ ಸಮುದಾಯದ ಯುವಕರು ಮನವೊಲಿಕೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಆಶಿಸುತ್ತಿದೆ. ಅದಕ್ಕಾಗಿ ಎಐಎಂಐಎಂ ನಾಯಕ ಅಸಾದುದ್ದೀನ್ ಒವೈಸಿ ಸೇರಿದಂತೆ ಪ್ರಮುಖರನ್ನೂ ಓಲೈಸಲೂ ಸರ್ಕಾರ ಮುಂದಾಗಿ ಎಂದು ತಿಳಿದು ಬಂದಿದೆ.
ಗುಪ್ತಚರ ಸಂಸ್ಥೆಗಳ ಮಾಹಿತಿ ಪ್ರಕಾರ ಮುಂಬೈ ಸಮೀಪದ ಕಲ್ಯಾಣ್ ನ ಇಬ್ಬರು, ಆಸ್ಟ್ರೇಲಿಯಾ ಮೂಲದ ಕಾಶ್ಮೀರಿ ಯುವಕ, ಕರ್ನಾಟಕ ಮತ್ತು ತೆಲಂಗಾಣದ ತಲಾ ಒಬ್ಬ, ಒಮನ್ ಮತ್ತು ಸಿಂಗಾಪುರದಲ್ಲಿರುವ ಭಾರತೀಯ ಮೂಲದ ಯುವಕರು ಐಎಸ್ ಸಂಘಟನೆಗಾಗಿ ಹೋರಾಡುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಗುಪ್ತಚರ ಸಂಸ್ಥೆ ನಿಗಾ ಇರಿಸಿದೆ. 
ಇದೇ ವೇಳೆ ಹಲವು ಸಂದರ್ಭಗಳಲ್ಲಿ ಭಯೋತ್ಪಾದನೆ ಹೆಸರಿನಲ್ಲಿ ಸಮುದಾಯದ ಯುವಕರನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸುವುದನ್ನು ಧಾರ್ಮಿಕ ಮುಖಂಡರು ಪ್ರಸ್ತಾಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?