ಮನಿಶ್ ತಿವಾರಿ 
ದೇಶ

ಅನುಪಮ್‌ ಖೇರ್‌ ಗೆ ವೀಸಾ ಕೊಡಿಸಲು ಮೋದಿ 'ಸ್ನೇಹಿತ' ಷರೀಫ್ ಜತೆ ಮಾತನಾಡಲಿ: ತಿವಾರಿ

ಬಾಲಿವುಡ್‌ ನಟ ಅನುಪಮ್‌ ಖೇರ್‌ ಅವರ ವೀಸಾ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಮನಿಶ್ ತಿವಾರಿ ಅವರು, ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಬಾಲಿವುಡ್‌ ನಟ ಅನುಪಮ್‌ ಖೇರ್‌ ಅವರ ವೀಸಾ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಮನಿಶ್ ತಿವಾರಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನಟನಿಗೆ ವೀಸಾ ಕೊಡಿಸಲು ತಮ್ಮ ಸ್ನೇಹಿತ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಮಾತನಾಡಲಿ ಎಂದು ಬುಧವಾರ ಟ್ವಿಟ್ ಮಾಡಿದ್ದಾರೆ.
'ಭಾರತ ಸಹಿಷ್ಣುತಾ ದೇಶ ಎಂದು ಪ್ರಚಾರ ಮಾಡುತ್ತಿರುವ ಖೇರ್ ಅವರು ಪಾಕಿಸ್ತಾನಕ್ಕೆ ತೆರಳಲು ಉತ್ಸುಕರಾಗಿದ್ದರೆ, ಪ್ರಧಾನಿ ಮೋದಿ ಅವರು ತಮ್ಮ ಸ್ನೇಹಿತನಿಗೆ ವೀಸಾ ಕೊಡಿಸಲು ಮತ್ತೊಬ್ಬ ಸ್ನೇಹಿತ ನವಾಜ್ ಷರೀಫ್ ಅವರೊಂದಿಗೆ ಖಂಡಿತ ಮಾತನಾಡಿಬೇಕು' ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.
ಅನುಪಮ್ ಖೇರ್ ಅವರು ಫೆಬ್ರವರಿ 5ರಿಂದ ಕರಾಚಿಯಲ್ಲಿ ಆರಂಭವಾಗಲಿರುವ ನಾಲ್ಕು ದಿನಗಳ ಸಾಹಿತ್ಯ ಉತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಬೇಕಾಗಿತ್ತು. ಆದರೆ ಪಾಕಿಸ್ತಾನ ಅವರಿಗೆ ವೀಸಾ ನೀಡಲು ನಿರಾಕರಿಸಿದೆ.
ಇದಕ್ಕೂ ಮುನ್ನ ಕಾಶ್ಮೀರ ಪಂಡಿತರ ಬಗ್ಗೆ ಅನುಪಮ್ ಖೇರ್ ಅವರ ಹೇಳಿಕೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಪರವಾದ ಅವರ ನಿಲುವು ಪಾಕ್ ವೀಸಾ ನಿರಾಕರಿಸಲು ಕಾರಣವಾಗಿರಬಹುದು ಎಂದು ತಿವಾರಿ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT