ಜೈಪುರ: ಉಗ್ರವಾದವನ್ನು ನಿರ್ಮೂಲನೆ ಮಾಡಬೇಕೆಂದರೆ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳನ್ನು ಬಹಿರಂಗಗೊಳಿಸಿ ಎಚ್ಚರಿಕೆ ನೀಡಬೇಕು ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ಜೈಶಂಕರ್ ಹೇಳಿದ್ದಾರೆ.
ಪರೋಕ್ಷವಾಗಿ ಪಾಕಿಸ್ತಾನದ ಬಗ್ಗೆ ಮಾತನಾಡಿರುವ ಜೈಶಂಕರ್, ಕೆಲವು ರಾಷ್ಟ್ರಗಳು ಹೊರಗಿನ ಭಯೋತ್ಪಾದನೆಯನ್ನು ಬೆಂಬಲಿಸಿ ತಮ್ಮ ನೆಲದಲ್ಲಿ ಶಾಂತಿ ಕಾಪಾಡಿಕೊಳ್ಳಬಹುದೆಂಬ ಭ್ರಮೆಯಲ್ಲಿದೆ. ಅಂತಹ ರಾಷ್ಟ್ರಗಳು ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವುದನ್ನು ಬಹಿರಂಗಗೊಳಿಸಬೇಕು ಎಂದು ಭದ್ರತೆ ಕುರಿತು ಜೈಪುರದಲ್ಲಿ ನಡೆದ ಸಮ್ಮೇಳನವೊಂದರಲ್ಲಿ ಭಾಗವಹಿಸಿ ಮಾತನಾಡಿದ ಜೈ ಶಂಕರ್ ಅಭಿಪ್ರಾಯಪಟ್ಟಿದ್ದಾರೆ.
ಪಠಾಣ್ ಕೋಟ್ ದಾಳಿ ತನಿಖೆ ವಿಷಯದ ಭಾರತ ಸರ್ಕಾರ ಪಾಕಿಸ್ತಾನದೊಂದಿಗೆ ಸಂಪರ್ಕದಲ್ಲಿದೆ. ಉಗ್ರವಾದವನ್ನು ನಿರ್ನಾಮ ಮಾಡಬೇಕೆಂದರೆ ಅಂತಾರಾಷ್ಟ್ರೀಯ ಸಮುದಾಯದ ಸಹಕಾರ ಅತ್ಯಗತ್ಯ ಎಂದು ಜೈಶಂಕರ್ ಹೇಳಿದ್ದಾರೆ.