ಸುಪ್ರೀಂ ಕೋರ್ಟ್ 
ದೇಶ

ಬಿಸಿಸಿಐ ಗೆ ಸುಪ್ರಿಂ ತಪರಾಕಿ: ಲೋಧಾ ಸಮಿತಿ ಸಲಹೆ ಅಳವಡಿಸಿಕೊಳ್ಳಲು ಸೂಚನೆ

ನಿವೃತ್ತ ನ್ಯಾಯಮೂರ್ತಿ ಆರ್.ಎಂ. ಲೋಧಾ ಅವರನ್ನೊಳಗೊಂಡ ಸಮಿತಿಯ ಸಲಹೆಗಳನ್ನು ಅಳವಡಿಸಿಕೊಳ್ಳದೇ ಇರುವ ಬಗ್ಗೆ ಗರಂ ಆಗಿರುವ ಸುಪ್ರೀಂ ಕೋರ್ಟ್ ಗುರುವಾರ ಭಾರತೀಯ...

ನವದೆಹಲಿ: ನಿವೃತ್ತ ನ್ಯಾಯಮೂರ್ತಿ ಆರ್.ಎಂ. ಲೋಧಾ ಅವರನ್ನೊಳಗೊಂಡ ಸಮಿತಿಯ ಸಲಹೆಗಳನ್ನು ಅಳವಡಿಸಿಕೊಳ್ಳದೇ ಇರುವ ಬಗ್ಗೆ ಗರಂ ಆಗಿರುವ ಸುಪ್ರೀಂ ಕೋರ್ಟ್ ಗುರುವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದೆ.

ಸದಾ ಒಂದಲ್ಲಾ ಒಂದು ವಿವಾದಗಳನ್ನು ಸುತ್ತಿಕೊಳ್ಳುತ್ತಲೇ ಇರುವ ಬಿಸಿಸಿಐನ ಆಡಳಿತ ಪಾರದರ್ಶಕವಾಗಿ ಇರುವಂತೆ ಮತ್ತು ಜಟಿಲಗೊಳ್ಳದಂತೆ ನಿಭಾಯಿಸುವ ಸಲುವಾಗಿ ಸುಪ್ರೀಂಕೋರ್ಟ್ ನಿಂದಲೇ ನೇಮಕಗೊಂಡಿದ್ದ ನ್ಯಾಯಮೂರ್ತಿ ಲೋಧಾ ಸಮಿತಿ ಕೊಟ್ಟಿದ್ದ ಸಲಹೆಗಳನ್ನು ಒಪ್ಪದೇ ಇರುವ ಪ್ರಶ್ನೆಯೇ ಇಲ್ಲ. ಸಮಿತಿ ಶಿಫಾರಸನ್ನು ಒಪ್ಪಲೇ ಬೇಕಾಗುತ್ತದೆ, ನಿಮಗೆ ಇನ್ನೊಂದು ಇನಿಂಗ್ಸ್ ಇಲ್ಲ’ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಲೋಧಾ ಸಮಿತಿ ತನ್ನ ಶಿಫಾರಸನ್ನು ವರದಿಯನ್ನು ಸುಪ್ರೀಂ ಕೋರ್ಟ್​ಗೂ ಸಲ್ಲಿಸಿದೆ. ಆದರೆ ಬಿಸಿಸಿಐ ಇನ್ನೂ ಇದನ್ನು ಅಳವಡಿಸಿಕೊಳ್ಳದೆ ಇರುವುದಕ್ಕೆ ಸುಪ್ರೀಂಕೋರ್ಟ್ ಗುರುವಾರ ತರಾಟೆಗೆ ತೆಗೆದುಕೊಂಡು, ಮಾರ್ಚ್ 3ರ ಒಳಗೆ ಉತ್ತರಿಸುವಂತೆ ಹೇಳಿದೆ.

ಇಂಡಿಯನ್ ಪ್ರಿಮಿಯರ್ ಲೀಗ್​ನಲ್ಲಿ ಆದ ಅವ್ಯವಹಾರ, ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣಗಳ ಹಿನ್ನೆಲೆಯಲ್ಲಿ ಬಿಸಿಸಿಐ ಸುಧಾರಣೆ ಕ್ರಮಗಳ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ 2015ರಲ್ಲಿ ಲೋಧಾ ಸಮಿತಿಯನ್ನು ರಚಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?