ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರಿನ ಚಿತ್ರ 
ದೇಶ

ಹಾಸ್ಯ ನಟ ಮದುರೈ ಮುತ್ತು ಪತ್ನಿ ಅಪಘಾತದಲ್ಲಿ ನಿಧನ

ತಮ್ಮ ಹಾಸ್ಯದ ಮೂಲಕವೇ ತಮಿಳುನಾಡಿನಾದ್ಯಂತ ಹೆಸರು ಮಾಡಿದ್ದ ಹಾಸ್ಯ ನಟ ಮದುರೈ ಮುತ್ತು ಅವರ ಪತ್ನಿ ವೈಯಮ್ಮಳ್(32) ಅಪಘಾತವೊಂದರಲ್ಲಿ ಸಾವನ್ನಪ್ಪಿರುವ ಘಟನೆ ಕೊಟ್ಟೈಯಿರುಪ್ಪು ಪ್ರದೇಶದಲ್ಲಿ ಗುರುವಾರ ನಡೆದಿದೆ...

ಶಿವಗಂಗಾ: ತಮ್ಮ ಹಾಸ್ಯದ ಮೂಲಕವೇ ತಮಿಳುನಾಡಿನಾದ್ಯಂತ ಹೆಸರು  ಮಾಡಿದ್ದ ಹಾಸ್ಯ ನಟ ಮದುರೈ ಮುತ್ತು ಅವರ ಪತ್ನಿ ವೈಯಮ್ಮಳ್(32) ಅಪಘಾತವೊಂದರಲ್ಲಿ ಸಾವನ್ನಪ್ಪಿರುವ ಘಟನೆ ಕೊಟ್ಟೈಯಿರುಪ್ಪು ಪ್ರದೇಶದಲ್ಲಿ ಗುರುವಾರ ನಡೆದಿದೆ.

ನಿನ್ನೆ ಬೆಳಿಗ್ಗೆ ವೈಯಮ್ಮಳ್ ಅವರು ತಮ್ಮ ಕಾರು ಚಾಲಕನೊಂದಿಗೆ ಶಿವಗಂಗಾ ಜಿಲ್ಲೆಯಲ್ಲಿರುವ ತಿರುಪ್ಪತೂರಿನ ಪಿಲ್ಲಿಯಾರ್ಪತ್ತಿ ದೇವಸ್ಥಾನಕ್ಕೆ ಹೋಗುತ್ತಿದ್ದರು. ಈ ವೇಳೆ ಕಾರು ಕೊಟ್ಟೈಯಿರುಪ್ಪು ಪ್ರದೇಶಕ್ಕೆ ಹೋಗುತ್ತಿರುವಾಗ ಕಾರಿನ ಹಿಂಭಾಗದ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಚಾಲಕ ಕಾರಿನ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. ನಂತರ ಕಾರು ರಸ್ತೆಯ ಬಳಿಯಿದ್ದ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವೈಯಮ್ಮಳ್ ಅವರು ತೀವ್ರವಾಗಿ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನ ಚಾಲಕ ಕೂಡ ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಆತನನ್ನು ತಿರುಪ್ಪತ್ತೂರಿನಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಆತನ ಸ್ಥಿತಿ ಚಿಂತಾಜನಕವಾಗಿರುವ ಹಿನ್ನೆಲೆಯಲ್ಲಿ ಮದುರೈ ನ ಜಿಆರ್ ಹೆಚ್ ಆಸ್ಪತ್ರೆಗೆ ದಾಖಲು ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಮೂಲಗಳ ಪ್ರಕಾರ ವೈಯಮ್ಮಳ್ ಅವರ ಪತಿ ಹಾಸ್ಯ ನಟ ಮುತ್ತು ಅವರು ಕಾರ್ಯಕ್ರಮವೊಂದಕ್ಕೆ ಭೇಟಿ ನೀಡುವ ಸಲುವಾಗಿ ವಿದೇಶಕ್ಕೆ ಹೋಗಿದ್ದರು. ತಮ್ಮ ಪತ್ನಿ ನಿಧನದ ವಾರ್ತೆ ತಿಳಿಯುತ್ತಿದ್ದಂತೆ ಮುತ್ತು ಅವರು ಕಾರ್ಯಕ್ರಮವನ್ನು ರದ್ದು ಮಾಡಿ ಮದುರೈಗೆ ಹಿಂತಿರುಗಿ ಬಂದಿದ್ದಾರೆಂದು  ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!