ಹಳಿ ತಪ್ಪಿದ ಬೆಂಗಳೂರು- ಕನ್ಯಾಕುಮಾರಿ ಎಕ್ಸ್ ಪ್ರೆಸ್ ರೈಲು 
ದೇಶ

ಹಳಿ ತಪ್ಪಿದ ಬೆಂಗಳೂರು- ಕನ್ಯಾಕುಮಾರಿ ಎಕ್ಸ್ ಪ್ರೆಸ್ ರೈಲು : 20 ಪ್ರಯಾಣಿಕರಿಗೆ ಗಾಯ

ಕನ್ಯಾಕುಮಾರಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಐಲ್ಯಾಂಡ್ ಎಕ್ಸ್ ಪ್ರೆಸ್ ರೈಲು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಬಳಿ ಹಳಿತಪ್ಪಿದ ಪರಿಣಾಮ 20 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಚೆನ್ನೈ: ಕನ್ಯಾಕುಮಾರಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಐಲ್ಯಾಂಡ್ ಎಕ್ಸ್ ಪ್ರೆಸ್ ರೈಲು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಪಂಜೂರ್ ಗ್ರಾಮದ ಬಳಿ ಹಳಿತಪ್ಪಿದ ಪರಿಣಾಮ 20 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಎಸ್ 4 - ಎಸ್ 9 ವರೆಗಿನ 11 ಬೋಗಿಗಳು ಬೆಳಿಗ್ಗೆ 4 :15 ವೇಳೆ ಹಳಿತಪ್ಪಿವೆ.  ರೈಲ್ವೆ ರಕ್ಷಣಾ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು ಗಾಯಗೊಂಡಿರುವ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.  ಗಾಯಗೊಂಡಿರುವ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲು ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು. ಪ್ರಯಾಣಿಕರಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೈಲು ಹಳಿತಪ್ಪಿರುವುದರಿಂದ ಚೆನ್ನೈ ಮಾರ್ಗದ 2 ರೈಲು ಸಂಚಾರ ರದ್ದು ಮಾಡಲಾಗಿದೆ.
ಸಹಾಯವಾಣಿ ವಿವರ:
ಮಧುರೈ: 0452-2308250

ಸೇಲಂ: 0427-2431947

ತ್ರಿಚೂರ್: 0487-2430060

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT