ಮುಂಬೈ: ಮಹಾರಾಷ್ಟ್ರದ ರಾಳೆಗಣ್ ಸಿದ್ಧಿಯಲ್ಲಿರುವ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರ ಕಚೇರಿಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಬಾಲು ಎಂದು ಗುರುತಿಸಲಾಗಿದ್ದು, ಹಜಾರೆಯವರ ಕಚೇರಿಯಲ್ಲಿ ಬುಧವಾರ ಸಂಜೆ ವಿಷ ಸೇವಿಸಿದ್ದರು. ಬಳಿಕ ಅವರನ್ನು ಪಾರ್ನರ್ ಪೊಲೀಸರ ನೆರವಿನೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪಾರ್ನರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಹಣ್ಣಾ ಹಜಾರೆ ಅವರು, ಭೂ ವಿವಾದದ ಹಿನ್ನೆಲೆಯಲ್ಲಿ ಆ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ವಿವಾದ ಕೋರ್ಟ್ ನಲ್ಲಿ ಬಗೆಹರಿಸಿಕೊಳ್ಳಬೇಕು. ಸಮಸ್ಯೆಗೆ ಆತ್ಮಹತ್ಯೆ ಪರಿಹಾರ ಅಲ್ಲ ಎಂದಿದ್ದಾರೆ.