ನವದೆಹಲಿ: ಇಸ್ಲಾಮಿಕ್ ಸ್ಟೇಟ್ ಆಪ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ದೆಹಲಿಯಲ್ಲಿ ಓರ್ವ ಶಂಕಿತ ಉಗ್ರನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಮೂಲದ ಮೊಹಸೀನ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಆತನ ಬಳಿಯಿದ್ದ 85 ಸಾವಿರ ರುಪಾಯಿಯನ್ನು ಜಫ್ತಿ ಮಾಡಿದ್ದಾರೆ.