ಬದೌನ್: ಇಬ್ಬರು ಯುವಕರು 15 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಅಮಿತ್ ಮತ್ತು ಆತನ ಸ್ನೇಹಿತ ಕೃಷ್ಣಾ ಯಾದವ್ ಎಂಬ ಇಬ್ಬರು ಯುವಕರು ಫೆಬ್ರವರಿ 1ರಂದು ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಆದರೆ, ಬಾಲಕಿ ನಿನ್ನೆ ಈ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ.
ವಿಷಯ ತಿಳಿದ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ.