ಇಸಿಸ್ ವಶದಲ್ಲಿರುವ 39 ಭಾರತೀಯರು ಸುರಕ್ಷಿತ: ಸುಷ್ಮಾ ಸ್ವರಾಜ್
ಇರಾಕ್ನಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಉಗ್ರರ ವಶದಲ್ಲಿರುವ 39 ಭಾರತೀಯರು ಜೀವಂತವಾಗಿದ್ದಾರೆ ಎಂದು ವಿದೇಶಾಂಗ...
ನವದೆಹಲಿ: ಇರಾಕ್ನಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಉಗ್ರರ ವಶದಲ್ಲಿರುವ 39 ಭಾರತೀಯರು ಜೀವಂತವಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಕಳೆದ ಒಂದುವರೆ ವರ್ಷದಿಂದ ಇರಾಕ್ನ ಮಸೂಲ್ ನಗರದಲ್ಲಿ ಇಸಿಸ್ ಒತ್ತೆಯಾಳುಗಳಾಗಿರುವ 39 ಭಾರತೀಯರು ಸುರಕ್ಷಿತವಾಗಿದ್ದಾರೆ. ಅರಬ್ ಮತ್ತು ಪ್ಯಾಲೆಸ್ತೀನ್ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ವಿಷಯ ತಿಳಿದು ಬಂದಿದೆ. ಇನ್ನು ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿಸಲು ಕೇಂದ್ರ ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದು ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಇರಾಕ್ನಲ್ಲಿ ಒತ್ತೆಯಾಳುಗಳಾಗಿರುವ ಭಾರತೀಯರ ಕುಟುಂಬ ಸದಸ್ಯರು ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸುಷ್ಮಾ ಒತ್ತೆಯಾಳುಗಳು ಸುರಕ್ಷಿತವಾಗಿರುವ ಕುರಿತು ಮಾಹಿತಿ ನೀಡಿದ್ದಾರೆ.
ಭಾರತೀಯ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ರಕ್ಷಿಸಲು ಅರಬ್ ರಾಷ್ಟ್ರಗಳ ಒಕ್ಕೂಟ ಸಹಕಾರ ನೀಡುವುದಾಗಿ ತಿಳಿಸಿದೆ. ಬಹರೈನ್ನಲ್ಲಿ ನಡೆದ ಮಾತುಕತೆಯಲ್ಲಿ ಅರಬ್ ರಾಷ್ಟ್ರಗಳ ಒಕ್ಕೂಟ ಈ ಭರವಸೆ ನೀಡಿದೆ ಎಂದು ಸುಷ್ಮಾ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.