ರೈಲಲ್ಲಿ ಟಿಕೆಟ್ ನೀಡುವ ವ್ಯವಸ್ಥೆ (ಸಂಗ್ರಹ ಚಿತ್ರ) 
ದೇಶ

ಶೀಘ್ರದಲ್ಲಿ ರೈಲಲ್ಲಿ ಟಿಕೆಟ್ ಕಂಡಕ್ಟರ್ ಸೇವೆ..?

ಬಸ್ ಗಳಲ್ಲಿ ಇರುವಂತೆ ರೈಲಲ್ಲೂ ಇನ್ನು ಮುಂದೆ ಟಿಕೆಟ್ ಕಂಡಕ್ಟರ್ ಸೇವೆಯನ್ನು ಆರಂಭಿಸಲು ಭಾರತೀಯ ರೈಲ್ವೇ ಇಲಾಖೆ ನಿರ್ಧಾರ ಕೈಗೊಂಡಿದೆ...

ನವದೆಹಲಿ: ಬಸ್ ಗಳಲ್ಲಿ ಇರುವಂತೆ ರೈಲಲ್ಲೂ ಇನ್ನು ಮುಂದೆ ಟಿಕೆಟ್ ಕಂಡಕ್ಟರ್ ಸೇವೆಯನ್ನು ಆರಂಭಿಸಲು ಭಾರತೀಯ ರೈಲ್ವೇ ಇಲಾಖೆ ನಿರ್ಧಾರ ಕೈಗೊಂಡಿದೆ.

ಟಿಕೆಟ್ ರಹಿತ ಪ್ರಯಾಣ ಮಾಡುವ ಪ್ರಯಾಣಿಕರು ದುಬಾರಿ ದಂಡ ನೀಡುವುದನ್ನು ತಪ್ಪಿಸಲು ರೈಲ್ವೇ ಇಲಾಖೆ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಈ ಕ್ರಮವನ್ನು  ಪ್ರಾಯೋಗಿಕವಾಗಿ ಜಾರಿಗೆ ತರಲು ಇಲಾಖೆ ನಿರ್ಧರಿಸಿದ್ದು, ಆರಂಭಿಕ ಹಂತವಾಗಿ ಉತ್ತರ ಪ್ರದೇಶದ ಮುಘಲ್ ಸರಾಯ್‍ನಲ್ಲಿ ಇದನ್ನು ಜಾರಿಗೆ ತರಲಾಗಿದೆ. ಮು೦ದಿನ ಮೂರು ತಿ೦ಗಳಲ್ಲಿ  ಇದರ ಸಾಧ್ಯಾ-ಸಾಧ್ಯತೆಗಳನ್ನು ಪರಿಶೀಲಿಸಿ ದೇಶಾದ್ಯ೦ತ ಜಾರಿಗೊಳಿಸಲು ನಿರ್ಧರಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಚಲಿಸುವ ರೈಲಿನಲ್ಲಿರುವ ನಿರ್ವಾಹಕರೇ ಪ್ರಯಾಣಿಕರಿ೦ದ ಹಣ ಪಡೆದು ಟಿಕೆಟ್ ನೀಡಲಿದ್ದಾರೆ. ಇದರಿ೦ದ ಟಿಕೆಟ್ ರಹಿತ ಪ್ರಯಾಣಕ್ಕೆ ಸಾರ್ವಜನಿಕರಿ೦ದ ದ೦ಡ ವಸೂಲಿ ಮಾಡುವುದು  ತಪ್ಪುತ್ತದೆ. ಅಲ್ಲದೆ, ರೈಲ್ವೇ ನಿಲ್ದಾಣದಲ್ಲಿ ಟಿಕೆಟ್ ನೀಡಿಕೆಯನ್ನು ಖಾಸಗಿಯವರಿಗೆ ವಹಿಸುವುದರಿ೦ದ ವ್ಯವಸ್ಥೆ ಇನ್ನಷ್ಟು ಸುಧಾರಿಸಲಿದೆ ಎ೦ದು ಅವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡುವುದಿಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!