ಆರ್‌ಎಸ್‌ಎಸ್ ನಾಯಕ ಇಂದ್ರೇಶ್ ಕುಮಾರ್
ನವದೆಹಲಿ: ಮುಸ್ಲಿಂ ಸಮುದಾಯದ ಏಳಿಗೆಗಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ರಾಷ್ಟ್ರೀಯ ಸೇವಾ ಸಂಘ(ಆರ್‌ಎಸ್‌ಎಸ್) ಕಾರ್ಯನಿರ್ವಹಿಸುತ್ತಿದೆ ಎಂದು ಆರ್‌ಎಸ್‌ಎಸ್ ನಾಯಕ ಇಂದ್ರೇಶ್ ಕುಮಾರ್ ಹೇಳಿದ್ದಾರೆ.
ಆರ್‌ಎಸ್‌ಎಸ್ ನ ಮುಸ್ಲಿಂ ರಾಷ್ಟ್ರೀಯ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಉನ್ನತಿಗಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯನಿರ್ವಹಿಸಲು ಸಿದ್ಧವಿದೆ. ಅಷ್ಟೇ ಅಲ್ಲದೇ, ಮುಸ್ಲಿಂ ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಶಿಕ್ಷಣ ನೀಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದಕ್ಕಾಗಿ ಅನೇಕ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಮುಸ್ಲಿಂ ಸಮುದಾಯದವರಿಗಾಗಿ ಬಿಜೆಪಿ ಜಾರಿಗೆ ತಂದಿರುವ ಯೋಜನೆಗಳ ಪ್ರಯೋಜವನ್ನು ಪಡೆದುಕೊಂಡರೆ, ದೇಶ ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯ ಎಂದ ಅವರು, ವಿವಿಧ ಪಕ್ಷಗಳು ಬಡತನದಲ್ಲಿರುವ ಮುಸ್ಲಿಮರನ್ನು ಮುಂದಿಟ್ಟುಕೊಂಡು ರಾಜಕೀಯ ಓಲೈಕೆ ಮಾಡುತ್ತಿರುತ್ತವೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics