ಸುಪ್ರೀಂ ತೀರ್ಪಿನ ನಂತರವಷ್ಟೇ ರಾಮ ದೇಗುಲ ನಿರ್ಮಾಣ ನಿರ್ಧಾರ: ಕಲ್‌ರಾಜ್ ಮಿಶ್ರಾ 
ದೇಶ

ಸುಪ್ರೀಂ ತೀರ್ಪಿನ ನಂತರವಷ್ಟೇ ರಾಮ ದೇಗುಲ ನಿರ್ಮಾಣ ನಿರ್ಧಾರ: ಕಲ್‌ರಾಜ್ ಮಿಶ್ರಾ

ಸುಪ್ರೀಂಕೋರ್ಟ್ ತೀರ್ಪು ಬಂದ ನಂತರವಷ್ಟೇ ರಾಮ ದೇಗುಲ ನಿರ್ಮಾಣ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಕಲ್‌ರಾಜ್ ಮಿಶ್ರಾ ಅವರು ಸೋಮವಾರ ಹೇಳಿದ್ದಾರೆ...

ನವದೆಹಲಿ: ಸುಪ್ರೀಂಕೋರ್ಟ್ ತೀರ್ಪು ಬಂದ ನಂತರವಷ್ಟೇ ರಾಮ ದೇಗುಲ ನಿರ್ಮಾಣ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಕಲ್‌ರಾಜ್ ಮಿಶ್ರಾ ಅವರು ಸೋಮವಾರ ಹೇಳಿದ್ದಾರೆ.

ಅಯೋಧ್ಯೆ ರಾಮ ದೇಗುಲ ನಿರ್ಮಾಣ ಕುರಿತಂತೆ ಮಾತನಾಡಿರುವ ಅವರು, ರಾಮ ದೇಗುಲ ವಿಚಾರದಲ್ಲಿ ಬಿಜೆಪಿ ತನ್ನ ನಿಲುವನ್ನು ಎಂದಿಗೂ ಬದಲಿಸುವುದಿಲ್ಲ. ಸುಪ್ರೀಂಕೋರ್ಟ್ ಈ ಬಗ್ಗೆ ತೀರ್ಪು ನೀಡುವವರೆಗೂ ಕಾಯಲೇ ಬೇಕಿದೆ. ತೀರ್ಪು ಬಂದ ನಂತರವಷ್ಟೇ ದೇಗುಲ ನಿರ್ಮಾಣ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ ಪರಿಸ್ಥಿತಿಗೆ ಅನುಗುಣವಾಗಿ ಕೇಂದ್ರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ  ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ವಿಶ್ವ ಹಿಂದೂ ಪರಿಷತ್ ನಡೆಸಿದ ಸಭೆಯಲ್ಲಿ ಸಂಘ ಪರಿವಾರ ನಾಯಕರು ಪ್ರಧಾನಿ ಮೋದಿಯವರು ದೇಗುಲ ನಿರ್ಮಾಣ ವಿಚಾರದಲ್ಲಿ ವಹಿಸಿರುವ ಮೌನವನ್ನು ಕೂಡಲೇ ಮುರಿಯಬೇಕು ಎಂದು ಆಗ್ರಹಿಸಿದ್ದರು.

ಸಂಘ ಪರಿವಾರದ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿರುವ ಮಿಶ್ರಾ ಅವರು, ಮೋದಿಯವರು ದೇಶದ ಪ್ರತಿಯೊಂದು ಕ್ಷೇತ್ರಕ್ಕೂ ಭೇಟಿ ನೀಡುತ್ತಿದ್ದಾರೆ. ಅಯೋಧ್ಯೆಗೆ ಯಾಕೆ ಭೇಟಿ ನೀಡಿಲ್ಲ ಎಂಬುದಕ್ಕೆ ಯಾವುದೇ ಕಾರಣಗಳಿಲ್ಲ. ಧಾರ್ಮಿಕ ನಾಯಕ ಭಾವನೆಗಳನ್ನು ಗೌರವಿಸಬೇಕು. ಪ್ರಧಾನಿಯವರು ವೈಯಕ್ತಿಕವಾಗಿ ಯಾವುದೇ ನಿರ್ಧಾನಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕಿದೆ. ಮೋದಿಯವರು ಅಯೋಧ್ಯೆಯಲ್ಲಿ ದೇಗುಲ ನಿರ್ಮಾಣವನ್ನು ಮಾಡಲಿದ್ದಾರೆಂದರ ಬಗ್ಗೆ ಮಾತ್ರ ಭರವಸೆ ನೀಡಬಲ್ಲೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ