ಆಂಟನಿ ವರ್ಘೀಸ್ 
ದೇಶ

ನೀರಿನಲ್ಲಿ ಮುಳುಗಿದ್ದ ಕಾರ್ಮಿಕರನ್ನು ರಕ್ಷಿಸಲು ಹೋಗಿ ತನ್ನ ಪ್ರಾಣವನ್ನೂ ಕಳೆದುಕೊಂಡ!

ನೀರಿನಲ್ಲಿ ಮುಳುಗುತ್ತಿದ್ದ ವಲಸಿಗ ಕಾರ್ಮಿಕರನ್ನು ರಕ್ಷಿಸಲು ಹೋದ ವ್ಯಕ್ತಿ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಕೊಟ್ಟಾಯಂ ನಲ್ಲಿ ನಡೆದಿದೆ.

ಕೊಟ್ಟಾಯಂ: ನೀರಿನಲ್ಲಿ ಮುಳುಗುತ್ತಿದ್ದ ವಲಸಿಗ ಕಾರ್ಮಿಕರನ್ನು ರಕ್ಷಿಸಲು ಹೋದ ವ್ಯಕ್ತಿ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಕೊಟ್ಟಾಯಂ ನಲ್ಲಿ ನಡೆದಿದೆ.

ನೆರೆ ಮನೆಯವರ ಬಾವಿಯನ್ನು ಸ್ವಚ್ಛಗೊಳಿಸಲು ಬಂದಿದ್ದ ಪಶ್ಚಿಮ ಬಂಗಾಳದ ಮುಗಥಾರ್ ಹಾಗೂ ಜಗಂಗೀರ್ 36 ರಿಂಗ್ ಗಳಷ್ಟು ಆಳವಿರುವ ಬಾವಿಯಲಿ ಮುಳುಗಿ ಪ್ರಾಣಾಪಾಯಕ್ಕೆ ಸಿಲುಕಿ, ಸಹಾಯಕ್ಕಾಗಿ ಕೂಗುತ್ತಿದ್ದದ್ದು ಆಂಟನಿ ವರ್ಘೀಸ್ ಗೆ ಕೇಳಿಸಿದೆ. ತಕ್ಷಣವೆ ಎಚ್ಚೆತ್ತುಕೊಂಡ ಆಂಟನಿ ತನಗೆ ಎದುರಾಗಬಹುದಾದ ಆಪತ್ತನ್ನೂ ಲೆಕ್ಕಿಸದೇ ಬಾವಿಗೆ ಜಿಗಿದು ಕಾರ್ಮಿಕರ ಪ್ರಾಣ ರಕ್ಷಿಸಲು ಮುಂದಾಗಿದ್ದಾರೆ.

ಆದರೆ ಕಾರ್ಮಿಕರನ್ನು ರಕ್ಷಿಸಲು ಹೋದ ಆಂಟನಿಯೂ ಸೇರಿದಂತೆ ಮೂರೂ ಜನರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೂವರು ನೀರಿನಲ್ಲಿ ಮುಳುಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಚಿಂಗವನಂ ಪೊಲೀಸರು ಹಾಗೂ   ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬಾವಿಯಲ್ಲಿ ಸಿಲುಕಿಕೊಂಡಿದ್ದವರನ್ನು ಹತ್ತಿರದಲ್ಲೇ ಇದ್ದ ಚಂಗನಸ್ಸೆರಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಮೂವರೂ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT