ರಸ್ತೆ ಸುರಕ್ಷಾ ಅಭಿಯಾನಕ್ಕೆ ಕೈ ಜೋಡಿಸಿದ ಸಚಿನ್ ತೆಂಡೂಲ್ಕರ್
ನವದೆಹಲಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ರಸ್ತೆ ಸುರಕ್ಷಾ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಭಾನುವಾರ ನವದೆಹಲಿಯಲ್ಲಿ 5000 ಮಕ್ಕಳಿಗೆ ರಸ್ತೆ ಸುರಕ್ಷೆ ಬಗ್ಗೆ ಪ್ರತಿಜ್ಞೆ ಹೇಳಿ ಕೊಡುವ ಮೂಲಕ ಸಚಿನ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಪ್ರತೀ ದಿನ ರಸ್ತೆಗಳಲ್ಲಿ ಹಲವಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಿರುವುದು ದುಃಖದ ಸಂಗತಿ. ರಸ್ತೆ ನಿಯಮಗಳನ್ನು ಪಾಲಿಸುವುದು ಎಲ್ಲರ ಕರ್ತವ್ಯ ಎಂದು ಅಭಿಯಾನಕ್ಕೆ ಚಾಲನೆ ನೀಡಿದ ಸಚಿನ್ ಹೇಳಿದ್ದಾರೆ.
ಕ್ರಿಕೆಟ್ನಲ್ಲಿ ಬ್ಯಾಟ್ಸ್ಮೆನ್ ಮತ್ತು ನಾನ್ ಸ್ಟ್ರೈಕರ್ ನಡುವೆ ಇರುವ ಜತೆಯಾಟದಂತೆ ವಾಹನ ಚಾಲಕರು ಮತ್ತು ಪಾದಚಾರಿಗಳ ನಡುವೆ ಪಾಟ್ನರ್ಶಿಪ್ ಇರಬೇಕು ಎಂದು ಸಚಿನ್ ಅಭಿಪ್ರಾಯ ಪಟ್ಟಿದ್ದಾರೆ. ಆಸ್ಟರ್ ಡಿಎಂ ಹೆಲ್ತ್ಕೇರ್ ನ ಸಹಯೋಗದಲ್ಲಿ ಈ ಅಭಿಯಾನ ನಡೆದಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics