ಕಿರಣ್ ರಿಜಿಜು ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದೆಹಲಿ...
ನವದೆಹಲಿ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದೆಹಲಿ ಸಮೀಪದ ಹಿಂದೊನ್ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮಂಗಳವಾರ ನಡೆದಿದೆ.
ಇಂದು ಮಧ್ಯಾಹ್ನ ದೆಹಲಿಯ ಸಫ್ದರ್ ಜಂಗ್ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಕಾಪ್ಟರ್ ನ ಗೇರ್ ಬಾಕ್ಸ್ ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಪೈಲಟ್ ತುರ್ತು ಭೂಸ್ಪರ್ಶ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಧ್ಯಾಹ್ನ ಸುಮಾರು 12.10ರ ಸುಮಾರಿಗೆ ಈ ಘಟನೆ ನಡೆದಿದ್ದು, ಸಚಿವ ಕಿರಣ್ ರಿಜಿಜು ಅವರು ಗಡಿ ಭದ್ರತಾ ಪಡೆಯ ಹೆಲಿಕಾಪ್ಟರ್ ಎಂಐ-17 ನ5 ನಲ್ಲಿ ಉತ್ತರಾಖಂಡ್ ನ ತೆಹ್ರಿ ಡ್ಯಾಮ್ ಗೆ ತೆರಳುತ್ತಿದ್ದರು ಎನ್ನಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.