ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ ನಿಯಮ, ನಾಳೆ ನಿರ್ಧಾರ

ದೇಶಾದ್ಯಂತ ಭಾರಿ ಸುದ್ದಿ ಮಾಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಮ-ಬೆಸ ಸಾರಿಗೆ ನಿಯಮವನ್ನು ಮತ್ತೆ ಜಾರಿಗೊಳಿಸುವ ಬಗ್ಗೆ ದೆಹಲಿ...

ನವದೆಹಲಿ: ದೇಶಾದ್ಯಂತ ಭಾರಿ ಸುದ್ದಿ ಮಾಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಮ-ಬೆಸ ಸಾರಿಗೆ ನಿಯಮವನ್ನು ಮತ್ತೆ ಜಾರಿಗೊಳಿಸುವ ಬಗ್ಗೆ ದೆಹಲಿ ಸರ್ಕಾರ ನಾಳೆ ನಿರ್ಧರಿಸಲಿದೆ.
'ಸಮ-ಬೆಸ ನಿಯಮ ಮತ್ತೆ ಜಾರಿಗೊಳಿಸಬೇಕು ಎಂದು ದೆಹಲಿಗರು ತಮ್ಮ ಹೃದಯದಿಂದ ಹೇಳುತ್ತಿದ್ದಾರೆ. ಹೀಗಾಗಿ ನಾಳೆ ಈ ಕುರಿತು ಎಲ್ಲಾ ಇಲಾಖೆಗಳ ಜೊತೆ ಸಭೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು' ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಹೇಳಿದ್ದಾರೆ.
ಪ್ರಾಯೋಗಿಕವಾಗಿ ಜನವರಿ 1ರಿಂದ 15 ದಿನಗಳ ಕಾಲ ಸಮ-ಬೆಸ ನಿಯಮ ಜಾರಿಗೆ ಮಾಡಲಾಗಿತ್ತು. ಈ ಬಗ್ಗೆ ಸರ್ಕಾರಿ ವೆಬ್ ಸೈಟ್ ನಲ್ಲಿ ಸುಮಾರು 12 ಲಕ್ಷ ಸಲಹೆಗಳು ಬಂದಿವೆ. ಅಲ್ಲದೆ ಈ ಕುರಿತು 200 ಜನ ಸಭಾಗಳನ್ನು ನಡೆಸಲಾಗಿದೆ ಎಂದು ಸಿಸೋಡಿಯಾ ತಿಳಿಸಿದರು.
ಆಮ್ ಆದ್ಮಿ ಸರ್ಕಾರ ಸಮ-ಬೆಸ ನಿಯಮವನ್ನು ಜಾರಿಗೊಳಿಸಲು ನಿರ್ಧರಿಸಿದ್ದು, ಮಾರ್ಚ್ ನಲ್ಲಿ ನಡೆಯುವ 10ನೇ ಹಾಗೂ 12 ತರಗತಿಯ ಪರೀಕ್ಷೆಗಳು ಮುಗಿದ ನಂತರ ಮತ್ತೆ ಸಮ-ಬೆಸ ನಿಯಮವನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ