ನವದೆಹಲಿ: ಮುಖ್ಯಮಂತ್ರಿಗಳಿಗೆ ನೀಡಿರುವ ವಿಶೇಷ ಅಧಿಕಾರವನ್ನು ರಾಜ್ಯಪಾಲರು ಚಲಾಯಿಸುಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಕುರಿತು ವಿಚಾರಣೆ ನಡೆಯುತ್ತಿರುವ ವೇಳೆ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ. ಅರುಣಾಚಲ ಪ್ರದೇಶದ ರಾಜ್ಯಪಾಲ ಜೆ.ಪಿ. ರಾಜ್‌ಖೋವಾ ಅವರು ವಿಧಾನಸಭೆ ಅಧಿವೇಶನದ ದಿನಾಂಕವನ್ನು ಬದಲಿಸಿ ಮುಂಚಿತವಾಗಿ ನಡೆಸಲು ನಿರ್ಧರಿಸಿದ್ದರು ಎಂದು ಆರೋಪಿಸಿ ಕಾಂಗ್ರೆಸ್‌ನ ಕೆಲವು ನಾಯಕರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಜೆ.ಎಸ್ ಖೆಹರ್ ಅವರನ್ನೊಳಗೊಂಡ ಪೀಠ, ಮುಖ್ಯಮಂತ್ರಿಗಳಿಗೆ ನೀಡಿರುವ ವಿಶೇಷ ಅಧಿಕಾರವನ್ನು ರಾಜ್ಯಪಾಲರು ಚಲಾಯಿಸಬಾರದು. ರಾಜ್ಯಪಾಲರು ಸೀಮಿತ ಅಧಿಕಾರ ಮಾತ್ರ ಹೊಂದಿದ್ದಾರೆ ಎಂದು ಹೇಳಿದೆ.
ಮುಖ್ಯಮಂತ್ರಿ ತಮ್ಮ ಸರ್ಕಾರದ ಬಹುಮತ ಸಾಬೀತುಪಡಿಸಬೇಕೆಂದು ಮನಬಂದಂತೆ ವಿಧಾನಸಭೆ ಅಧಿವೇಶನ ಕರೆಯುವ ಅಧಿಕಾರ ರಾಜ್ಯಪಾಲರಿಗೆ ಇಲ್ಲ ಎಂದು ಹೇಳಿದೆ. ಇಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಉಳಿಗಾಲವಿದೆ. ಸಂವಿಧಾನದ 175ನೇ ಕಲಂನ ಅನ್ವಯ ರಾಜ್ಯಪಾಲರಿಗೆ ಸೀಮಿತ ಅಧಿಕಾರ ಮಾತ್ರ ಇದೆ ಎಂದ ನ್ಯಾಯಾಪೀಠ, ರಾಜ್ಯಪಾಲರಿಗೆ ಕೆಲವೊಂದು ನಿರ್ಧಾರಗಳನ್ನು ಮಾತ್ರ ಸ್ವತಂತ್ರವಾಗಿ ತೆಗೆದುಕೊಳ್ಳುವ ಅಧಿಕಾರವಿದೆ. ಅದನ್ನು ಬಳಸಿಕೊಂಡರೆ ಸಾಕು, ಮುಖ್ಯಮಂತ್ರಿ ಅಧಿಕಾರವನ್ನು ಚಲಾಯಿಸುವಂತಿಲ್ಲ. ಅಷ್ಟೇ ಅಲ್ಲದೇ, ಯಾವುದೇ ನಿರ್ಧಾರ ತೆಗೆದುಕೊಳ್ಳವ ಮುನ್ನ ಮುಖ್ಯಮಂತ್ರಿ ಮತ್ತು ಸಚಿವರ ಸಲಹೆಗಳನ್ನು ಪಡೆಯುವುದು ಅಗತ್ಯವಾಗಿದೆ ಎಂದು ಪೀಠ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics