ಅಪಘಾತ 
ದೇಶ

ರಿವರ್ಸ್ ವೇಳೆ ಬ್ರೇಕ್ ಬದಲಿಗೆ ಆಕ್ಸಲೇಟರ್ ಒತ್ತಿದ; ಹಿಂಬದಿ ನಿಂತಿದ್ದ ಇಬ್ಬರ ಸಾವು

ಕಾರು ರಿವರ್ಸ್ ತೆಗೆಯುವಾಗ ಬ್ರೆಕ್ ಬದಲಿಗೆ ಆಕ್ಸಿಲೇಟರ್ ಒತ್ತಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ...

ಚೆನ್ನೈ: ಕಾರು ರಿವರ್ಸ್ ತೆಗೆಯುವಾಗ ಬ್ರೇಕ್ ಬದಲಿಗೆ ಆಕ್ಸಲೇಟರ್ ಒತ್ತಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

ಕಳೆದ ರಾತ್ರಿ ಅಪಾರ್ಟ್ ಮೆಂಟ್ ನಿಂದ ಕಾರನ್ನು ಹಿಂದಕ್ಕೆ ತೆಗೆಯುವಾಗ ಬ್ರೇಕ್ ಬದಲಿಗೆ ಆಕ್ಸಲೇಟರ್ ಒತ್ತಿದ ಪರಿಣಾಮ ಕಾರಿನ ಹಿಂದೆ ನಿಂತಿದ್ದ ಗುಂಪಿನ ಮೇಲೆ ಕಾರು ಹರಿದಿದೆ. ತೀವ್ರವಾಗಿ ಗಾಯಗೊಂಡ ನಾಲ್ವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಬುಧವಾರ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ.

ಅಪಾರ್ಟ್ ಮೆಂಟ್ ನ ಪಾರ್ಕಿಂಗ್ ನಲ್ಲಿ ನಾಲ್ವರು ಮಾತನಾಡುತ್ತಿದ್ದ ವೇಳೆ ಬ್ಯಾಂಕ್ ಮ್ಯಾನೆಜರ್ ಆಗಿರುವ ವೆಂಕಟೇಶ್ ಎಂಬುವರು ಈ ಅಪಘಾತ ಮಾಡಿದ್ದು, ವೆಂಕಟೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತರನ್ನು ಅಬ್ದುಲ್ ರಹಮನ್ ಮತ್ತು ಪ್ಯಾರೆಲಾಲ್ ಎಂದು ಗುರುತಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!