ರಾಮೇಶ್ವರಂ: ಕಚತಿವುನಲ್ಲಿ ಮೀನುಗಾರಿಕೆ ನಡೆಸುತ್ತಿದ್ದವರು ಜಲಗಡಿ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಶ್ರೀಲಂಕಾ ನೌಕಾಪಡೆ ತಮಿಳುನಾಡಿನ 12 ಮೀನುಗಾರರನ್ನು ಗುರುವಾರ ಬಂಧನಕ್ಕೊಳಪಡಿಸಿದೆ.
ಬಂಧಿತೆರೆಲ್ಲರೂ ತಮಿಳುನಾಡು ಮೂಲದವರಾಗಿದ್ದು, ಶ್ರೀಲಂಕಾಕ್ಕೆ ಸೇರಿದ ಕಚ್ ತಿವ್ ಪ್ರಾಂತ್ಯದಲ್ಲಿ ಮೀನುಗಾರಿಕೆ ನಡೆಸುತ್ತಿದ್ದರೆಂದು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬೋಟ್ ನಲ್ಲಿ ಬಂದ ಲಂಕಾ ನೌಕಾಪಡೆಯ ಸಿಬ್ಬಂದಿಗಳು 12 ಮೀನುಗಾರರನ್ನು ಮತ್ತು ಮೀನುಗಾರಿಕೆಗೆ ಬಳಿಸಿದ 2 ಬೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಎಲ್ಲಾ ಮೀನುಗಾರರನ್ನು ತಲೈಮನ್ನಾರ್ ಗೆ ಕರೆದುಕೊಂಡು ಹೋಗಿದ್ದಾರೆಂದು ಹೇಳಿದ್ದಾರೆ.