ನವದೆಹಲಿ: ವಾಯು ಮಾಲಿನ್ಯ ಕಡಿಮೆ ಮಾಡುವ ಉದ್ದೇಶದಿಂದ ದೆಹಲಿ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಸಮ-ಬೆಸ ಸಾರಿಗೆ ನಿಮಯವನ್ನು ಜಾರಿಗೊಳಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ತಿಳಿಸಿದ್ದಾರೆ.
ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಅವರು, ಕಳೆದ ಜನವರಿ 1ರಿಂದ 15ರವರೆಗೆ ಜಾರಿಗೊಳಿಸಲಾಗಿದ್ದ ಸಮ-ಬೆಸ ನಿಯಮಕ್ಕೆ ಸಂಬಂಧಿಸಿದಂತೆ ಜನರ ಪ್ರತಿಕ್ರಿಯೆ ಉತ್ತಮವಾಗಿದ್ದು, ಶೇ.78ರಷ್ಟು ದೆಹಲಿಗರು ಈ ನಿಮಯವನ್ನು ಮತ್ತೆ ಜಾರಿಗೊಳಿಸಬೇಕು ಎಂದಿದ್ದಾರೆ. ಹೀಗಾಗಿ ಎರಡನೇ ಹಂತದಲ್ಲಿ ಏಪ್ರಿಲ್ 15ರಿಂದ 30ರವರೆಗೆ ಸಮ-ಬೆಸ ನಿಯಮ ಜಾರಿಗೆ ಬರಲಿದೆ ಎಂದರು.
ಈ ಬಾರಿಯೂ ವಿಐಪಿಗಳಿಗೆ, ಒಂಟಿ ಮಹಿಳಾ ಚಾಲಕರಿಗೆ ಹಾಗೂ ದ್ವಿಚಕ್ರ ವಾಹನಗಳಿಗೆ ಸಮ-ಬೆಸ ನಿಯಮದಿಂದ ವಿನಾಯ್ತಿ ನೀಡಲಾಗಿದೆ ಎಂದು ದೆಹಲಿ ಸಿಎಂ ತಿಳಿಸಿದರು,
ಇದೇ ವೇಳೆ ದೆಹಲಿ ಸಾರಿಗೆ ಸಂಸ್ಥೆಯ ಬಸ್ ಗಳನ್ನು ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಕೇಜ್ರಿವಾಲ್ ಅವರು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics