ಅಫ್ಜಲ್ ಗುರು-ಸಾಂದರ್ಭಿಕ ಚಿತ್ರ 
ದೇಶ

ಉಗ್ರ ಅಫ್ಜಲ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ವಿರುದ್ಧ ದೇಶ ದ್ರೋಹ ಕೇಸ್

ಸಂಸತ್ ಮೇಲೆ ದಾಳಿ ನಡೆಸಿದ ಆರೋಪಿ ಅಫ್ಜಲ್ ಗುರು ಗಲ್ಲಿಗೇರಿಸಿದ್ದನ್ನು ಖಂಡಿಸಿ, ಇದೊಂದು ಜ್ಯುಡಿಶಿಯಲ್ ಕಿಲ್ಲಿಂಗ್ ಎಂದು ಆರೋಪಿಸಿ...

ನವದೆಹಲಿ: ಸಂಸತ್ ಮೇಲೆ ದಾಳಿ ನಡೆಸಿದ ಆರೋಪಿ ಅಫ್ಜಲ್ ಗುರು ಗಲ್ಲಿಗೇರಿಸಿದ್ದನ್ನು ಖಂಡಿಸಿ, ಇದೊಂದು ಜ್ಯುಡಿಶಿಯಲ್ ಕಿಲ್ಲಿಂಗ್ ಎಂದು ಆರೋಪಿಸಿ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ದೇಶ ದ್ರೋಹ ಪ್ರಕರಣ ದಾಖಲಿಸಿದ್ದಾರೆ.
ದೆಹಲಿಯಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಕೆಲ ವಿದ್ಯಾರ್ಥಿಗಳು ಅಫ್ಜಲ್ ಗುರು ಗಲ್ಲಿಗೇರಿಸಿದ್ದು ನ್ಯಾಯಾಂಗ ಕೊಲೆ ಎಂದು ಆರೋಪಿಸಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಅಲ್ಲದೇ, ಕಾಶ್ಮೀರಿ ವಲಸಿಗರ ಹಾಗೂ ಆಜಾದ್ ಕಾಶ್ಮೀರಿ ಪರ ವಿದ್ಯಾರ್ಥಿಗಳ ಗುಂಪು ಸಹಮತ ವ್ಯಕ್ತಪಡಿಸಿತ್ತು.
ಈ ಸಂಬಂಧ ಬಿಜೆಪಿ ಸಂಸದ ಡೆಲ್ಲಿ ಮಹೀಶ್ ಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಭಾರತ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಸಂಸದ ಗಿರಿ ಅವರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಮಾನವ ಸಂಪನ್ಮೂಲ ಸಚಿವ ಸ್ಮೃತಿ ಇರಾನಿ ಮತ್ತು ದೆಹಲಿ ಆಯುಕ್ತರಿಗೆ ಭಾರತ ವಿರೋಧಿ ಘೋಷಣೆ ಕೂಗಿದ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಪತ್ರ ಬರೆದಿದ್ದರು.
ವಿಶ್ವವಿದ್ಯಾಲಯಗಳಲ್ಲಿ ಇಂತಹ ಕಾರ್ಯಕ್ರಮವನ್ನು ನಡೆಸಲು ಬಿಡಬಾರದು. ಇಂತಹ ದೇಶದ್ರೋಹ ಕಾರ್ಯಕ್ರಮಗಳಿಂದ ಏಕತೆ ಕದಡುತ್ತದೆ. ಅಲ್ಲದೇ, ನಮ್ಮ ನೆಲದಲ್ಲಿ ದೇಶ ದ್ರೋಹಿಗಳು ಹೆಚ್ಚಾಗುತ್ತಾ ಹೋಗುತ್ತಾರೆ. ಇಂತಹವನ್ನು ಬುಡದಲ್ಲೇ ಮಟ್ಟ ಹಾಕಬೇಕು ಎಂದು ಸಂಸದ ಗಿರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಎನ್ ಯುನಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ್ದ ಉಗ್ರ ಅಫ್ಜಲ್ ಗುರುಗೆ ಸಂಬಂಧಿಸಿದಂತೆ ಎರಡು ವಿದ್ಯಾರ್ಥಿಗಳ ಬಣದ ನಡುವೆ ಗಲಾಟೆ ನಡೆದಿತ್ತು. ಸಂಸತ್ ಮೇಲೆ ದಾಳಿ ನಡೆಸಿದ ಆರೋಪಿ ಅಫ್ಜಲ್ ಗುರು ನೇಣಿಗೇರಿಸಿದ್ದನ್ನು ಖಂಡಿಸಿದ್ದಲ್ಲದೆ ಇದೊಂದು ಜ್ಯುಡಿಶಿಯಲ್ ಕಿಲ್ಲಿಂಗ್ ಎಂದು ಆರೋಪಿಸಿ ವಿದ್ಯಾರ್ಥಿಗಳ ಗುಂಪೊಂದು ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಅಷ್ಟೇ ಅಲ್ಲ ಶಾಯಿದ್ ಅಫ್ಜಲ್ ಗುರು ಪರ ಹಾಗೆ ಭಾರತ ವಿರೋಧಿ ಘೋಷಣೆ ಕೂಗಿತ್ತು.
ಆದರೆ ಈ ಕಾರ್ಯಕ್ರಮವನ್ನು ನಡೆಸಲು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಅನುಮತಿ ನೀಡಿರಲಿಲ್ಲ. ಆದರೆ ಇದನ್ನು ಲೆಕ್ಕಿಸದೇ ಕೆಲ ವಿದ್ಯಾರ್ಥಿಗಳು, ಅಫ್ಜಲ್ ಗುರು ಜ್ಯುಡಿಶಿಯಲ್ ಹತ್ಯೆಯನ್ನು ಖಂಡಿಸಿ ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆ ಬನ್ನಿ ಎಂದು ಆಹ್ವಾನಿಸಿ ಕ್ಯಾಂಪಸ್ ಸುತ್ತಮುತ್ತ ಪೋಸ್ಟರ್ ಗಳನ್ನು ಹಚ್ಚಿದ್ದರು. ಇದಕ್ಕೆ ಎಬಿವಿಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಸಂಬಂಧ ಉಪಕುಲಪತಿಗೆ ದೂರು ನೀಡಿತ್ತು. ಈ ಸಂಬಂಧ ಎರಡು ಗುಂಪುಗಳ ನಡುವೆ ಸಂಘರ್ಷಣೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!