ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ 
ದೇಶ

ಕುಮಾರ್ ವಿಶ್ವಾಸ್ ಹುಟ್ಟುಹಬ್ಬಕ್ಕೆ ಅಜಿತ್ ದೋವಲ್, ಬಿಜೆಪಿ ನಾಯಕರು ಹಾಜರು; ಕೇಜ್ರಿವಾಲ್ ಗೈರು!

ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಹುಟ್ಟುಹಬ್ಬದ ನಿಮಿತ್ತ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಬಿಜೆಪಿ ನಾಯಕರು ಭಾಗವಹಿಸಿದ್ದರು.

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಹುಟ್ಟುಹಬ್ಬದ ನಿಮಿತ್ತ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಬಿಜೆಪಿ ನಾಯಕರು ಭಾಗವಹಿಸಿದ್ದರು.
ಎನ್ಎಸ್ ಎ ದೋವಲ್ ಅವರೊಂದಿಗೆ ಆರ್ ಎಸ್ಎಸ್ ಮುಖಂಡ ರಾಮ್ ಲಾಲ್, ಬಿಜೆಪಿ ನಾಯಕ ಓಂ ಮಾಥುರ್, ಕೇಂದ್ರ ಸಚಿವ ರವಿಶಂಕರ್, ಪಿಯೂಷ್ ಗೋಯೆಲ್ ಸಹ ಕುಮಾರ್ ವಿಶ್ವಾಸ್ ಅವರ ಹುಟ್ಟುಹಬ್ಬದ ಸಮಾರಂಭದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಆದರೆ ಕುಮಾರ್ ವಿಶ್ವಾಸ್ ಪ್ರತಿನಿಧಿಸುವ ಆಮ್ ಆದ್ಮಿ ಪಕ್ಷದ ಮುಖಂಡ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾತ್ರ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ.
ಅರವಿಂದ್ ಕೇಜ್ರಿವಾಲ್ ಅವರ ಆರೋಪಕ್ಕೆ ನಿರಂತರವಾಗಿ ಗುರಿಯಾಗುವ ದೆಹಲಿ ಪೊಲೀಸ್ ಕಮಿಷನರ್ ಬಿಎಸ್ ಬಸ್ಸಿ ಸಹ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದು ಅಚ್ಚರಿಯುಂಟುಮಾಡಿದೆ. ಕುಮಾರ್ ವಿಶ್ವಾಸ್ ಅವರ ಹುಟ್ಟುಹಬ್ಬದ ಸಮಾರಂಭದಲ್ಲಿ ಬಿಜೆಪಿ ನಾಯಕರು ಭಾಗವಹಿಸಿರುವುದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಿಜೆಪಿ ಸೇರಲು ಚಿಂತನೆ ನಡೆಸಿದ್ದಾರೆ ಎಂಬ ಊಹಾಪೋಹಗಳಿಗೆ ದಾರಿ ಮಾಡಿಕೊಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ