ಕುಮಾರ್ ವಿಶ್ವಾಸ್ 
ದೇಶ

ಆಪ್ ನಾಯಕ ಕುಮಾರ್ ವಿಶ್ವಾಸ್ ಬರ್ತ್ ಡೇ ಪಾರ್ಟಿಯಲ್ಲಿ ಬಿಜೆಪಿ, ಆರೆಸ್ಸೆಸ್ಸ್ ನಾಯಕರು ಭಾಗಿ

ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಆರೆಸ್ಸೆಸ್ಸ್ ನ ...

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಆರೆಸ್ಸೆಸ್ಸ್ ನ ಇಬ್ಬರು ಹಿರಿಯ ನಾಯಕರು ಭಾಗವಹಿಸಿದ್ದಾರೆ.
ಆರೆಸ್ಸೆಸ್‌ನ ಹಿರಿಯ ನಾಯಕರಾದ ರಾಮ್‌ಲಾಲ್ ಮತ್ತು ಓಮ್ ಮಾಥೂರ್, ಬಿಜೆಪಿ ನಾಯಕರಾದ ರವಿಶಂಕರ್ ಪ್ರಸಾದ್, ಮನೋಜ್ ತಿವಾರಿ, ವಿಜಯ್ ಗೋಯಲ್, ಸುಧಾಂಶು ತ್ರಿವೇದಿ ಮೊದಲಾದವರು ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಬಿಜೆಪಿಯ ಇಷ್ಟೊಂದು ನಾಯಕರು ಬರ್ತ್‌ಡೇ ಪಾರ್ಟಿಯಲ್ಲಿ ಭಾಗವಹಿಸಿರುವುದರಿಂದ ಕುಮಾರ್ ವಿಶ್ವಾಸ್ ಬಿಜೆಪಿಗೆ ಸೇರಲಿದ್ದಾರೆ ಎಂಬ ಊಹಾಪೋಹಕ್ಕೆ ಸಾಕ್ಷ್ಯ ಸಿಕ್ಕಿದಂತಾಗಿದೆ.
ಆದರೆ ಅಂಥದ್ದೇನೂ ಇಲ್ಲ, ದೋವಲ್ ಸೇರಿದಂತೆ ಇವರೆಲ್ಲವೂ ವಿಶ್ವಾಸ್ ಅವರ ಹಳೇ ಗೆಳೆಯರು ಎಂದು ಕುಮಾರ್ ವಿಶ್ವಾಸ್ ಅವರ ಆಪ್ತರು ಹೇಳಿದ್ದಾರೆ.
ದೆಹಲಿಯ ಸಚಿವ ಸಂಪುಟ ಸಚಿವರು, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಪಕ್ಷದ ಶಾಸಕರೆಲ್ಲರೂ ಆ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ. ಅದೇ ವೇಳೆ ಕಾಂಗ್ರೆಸ್ ನಾಯಕರಾದ ಕಮಲ್‌ನಾಥ್, ನವಿನ್ ಜಿಂದಾಲ್, ರಾಜೀವ್ ಶುಕ್ಲಾ ಮತ್ತು ದೆಹಲಿ ಪೊಲೀಸ್ ಕಮಿಷನರ್ ಬಿಎಸ್ ಬಸ್ಸೀ ಕೂಡಾ ಹುಟ್ಟುಹಬ್ಬದಾಚರಣೆಯಲ್ಲಿ ಭಾಗಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ