ಶಬರಿಮಲೆ ದೇವಾಲಯ (ಸಂಗ್ರಹ ಚಿತ್ರ) 
ದೇಶ

ವೇದ, ಉಪನಿಷತ್ತುಗಳೇ ಬೇಧ ಮಾಡುವುದಿಲ್ಲ, ಶಬರಿಮಲೆಯಲ್ಲೇಕೆ?

ಶಬರಿಮಲೆಗೆ ಮಹಿಳೆಯ ಪ್ರವೇಶ ನಿಷೇಧ ವಿವಾದಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಸುಪ್ರೀಂ ಕೋರ್ಟ್ ಪರೋಕ್ಷ ಛಾಟಿ ಬೀಸಿದ್ದು, ಮಹಿಳೆಯರ ಪ್ರವೇಶವನ್ನು ನಿರಾಕರಿಸುತ್ತಿರುವುದೇಕೆ ಎಂದು ಪ್ರಶ್ನಿಸಿದೆ...

ನವದೆಹಲಿ: ಶಬರಿಮಲೆಗೆ ಮಹಿಳೆಯ ಪ್ರವೇಶ ನಿಷೇಧ ವಿವಾದಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಸುಪ್ರೀಂ ಕೋರ್ಟ್ ಪರೋಕ್ಷ ಛಾಟಿ ಬೀಸಿದ್ದು, ಮಹಿಳೆಯರ ಪ್ರವೇಶವನ್ನು  ನಿರಾಕರಿಸುತ್ತಿರುವುದೇಕೆ ಎಂದು ಪ್ರಶ್ನಿಸಿದೆ.

ಶಬರಿಮಲೆ ದೇವಾಲಯದೊಳಗೆ ಮಹಿಳೆಯರ ಪ್ರವೇಶವನ್ನು ನಿರಾಕರಿಸಿರುವ ದೇವಾಲಯದ ಆಡಳಿತ ಮಂಡಳಿಯ ನಿರ್ಧಾರವನ್ನು ಪ್ರಶ್ನಿಸಿ ಮಹಿಳಾ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ  ನ್ಯಾಯಪೀಠ, ವೇದ ಉಪನಿಷತ್ತುಗಳಲ್ಲಿಯೇ ಗಂಡು-ಹೆಣ್ಣಿನ ನಡುವೆ ತಾರತಮ್ಯ ಮಾಡಿಲ್ಲ. ಹೀಗಿರುವಾಗ ಶಬರಿಮಲೆ ದೇವಾಲಯದಲ್ಲೇಕೆ ಈ ತಾರತಮ್ಯವಿದೆ ಎಂದು ಪ್ರಶ್ನಿಸಿದೆ.

ಈ ವೇಳೆ ತಮ್ಮ ವಾದ ಮಂಡಿಸಿದ ದೇವಾಲಯದ ಪರ ವಕೀಲ ಕೆಕೆ ವೇಣುಗೋಪಾಲ್ ಅವರು, ಸಾವಿರಾರು ವರ್ಷಗಳಿಂದಲೂ ಮಹಿಳೆಯರ ಪ್ರವೇಶ ನಿಷೇಧವಾಗಿದೆ. ಇದೀಗ ಈ ವಿಚಾರವನ್ನು  ಕೆದುಕುತ್ತಿರುವುದೇಕೆ ಎಂದು ಪ್ರಶ್ನಿಸಿದರು. ಅಲ್ಲದೆ ಸ್ವಾಮಿ ಅಯ್ಯಪ್ಪ ಸ್ವಾಮಿ ದೇವಾಲಯವಿರುವ ಶಬರಿಮಲೆ ಬೆಟ್ಟ ಪರಿಶುದ್ಧವಾಗಿದ್ದು, ಮಹಿಳೆಯರು ಪ್ರವೇಶಿಸುವಂತಿಲ್ಲ ಎಂದು ಹೇಳಿದರು.

ವಾದ ಆಲಿಸಿದ ನ್ಯಾಯಪೀಠ "ಶಬರಿಮಲೆ ಪ್ರಕರಣವನ್ನು ನ್ಯಾಯಾಲಯ ಸಂಕುಚಿತ ದೃಷ್ಟಿಯಿಂದ ನೋಡುತ್ತಿಲ್ಲ. ಬದಲಾಗಿ ಸಾಂವಿಧಾನಿಕ ಸಮತೋಲನ ದೃಷ್ಟಿಯಿಂದ ಪ್ರಕರಣವನ್ನು ಪರಿಗಣಿಸಿದ್ದು, ಧಾರ್ಮಿಕ  ಆಚರಣೆಯಲ್ಲಿ ಇಬ್ಬರಿಗೂ ಸಮಾನ ಹಕ್ಕಿದೆ. ಹೀಗಿದ್ದೂ ಶಬರಿಮಲೆಯಲ್ಲೇಕೆ ಹೆಂಗಸರಿಗೆ ಪ್ರವೇಶವಿಲ್ಲ. ಇದಕ್ಕೇನಾದರೂ ಐತಿಹಾಸಿಕ ಕಾರಣಗಳಿವೆಯೇ ಎಂದು ನ್ಯಾಯಾಲಯ ದೇವಾಲಯದ ಆಡಳಿತ  ಮಂಡಳಿಯನ್ನು ಪ್ರಶ್ನಿಸಿದೆ. ಅಲ್ಲದೆ ಈ ರೀತಿಯ ನಿಷೇಧ ಯಾವಾಗ ಆರಂಭವಾಯಿತು ಎಂಬುದರ ಕುರಿತಾಗಿಯೂ ಆಡಳಿತ ಮಂಡಳಿಯಿಂದ ಮಾಹಿತಿ ಕೇಳಿದೆ.

ಈ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲು ಸುಪ್ರೀಂಕೋರ್ಟ್ ಪೀಠ ದೇವಾಲಯದ ಆಡಳಿತ ಮಂಡಳಿಗೆ 6 ವಾರಗಳ ಗಡುವು ನೀಡಿ, ವಿಚಾರಣೆಯನ್ನು ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!