ಅರವಿಂದ್ ಕೇಜ್ರಿವಾಲ್ 
ದೇಶ

ಜೆಎನ್ ಯು ದೇಶ ವಿರೋಧಿ ಪ್ರತಿಭಟನೆ: ತನಿಖೆಗೆ ಕೇಜ್ರಿವಾಲ್ ಆದೇಶ

ಜವಾಹರ್‍ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‍ಯು)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ದೇಶ ವಿರೋಧಿ ಪ್ರತಿಭಟನೆಯ ಕುರಿತು ತನಿಖೆ ನಡೆಸುವಂತೆ ದೆಹಲಿ...

ನವದೆಹಲಿ: ಜವಾಹರ್‍ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‍ಯು)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ದೇಶ ವಿರೋಧಿ ಪ್ರತಿಭಟನೆಯ ಕುರಿತು ತನಿಖೆ ನಡೆಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಸೂಚಿಸಿದ್ದಾರೆ.
ಯಾವುದೇ ಕಾರಣಕ್ಕೂ ದೇಶ ವಿರೋಧಿ ಕೃತ್ಯಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದಿರುವ ದೆಹಲಿ ಸಿಎಂ, ದೇಶ ವಿರೋಧಿ ಕೃತ್ಯ ಎಸಗಿದವರನ್ನು ಗುರುತಿಸಿ, ಶಿಕ್ಷಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.
ಜೆಎನ್ ಯು ವಿದ್ಯಾರ್ಥಿ ಸಂಘದ ನಾಯಕರು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಆದರೆ ಇದಕ್ಕೆ ಪ್ರತಿಯಾಗಿ ಎಬಿವಿಪಿ ವಿದ್ಯಾರ್ಥಿಗಳು ಆ ಕೆಲಸ ಮಾಡಿದ್ದಾರೆ ಎಂದು ದೂರಲಾಗುತ್ತಿದೆ. ಹೀಗಾಗಿ ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ದೆಹಲಿ ಸಿಎಂ ತಿಳಿಸಿದ್ದಾರೆ.
ಫೆಬ್ರವರಿ 9ರಂದು ವಿವಿಯಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ವೇಳೆ ಕೆಲವು ವಿದ್ಯಾರ್ಥಿಗಳು ಅಫ್ಜಲ್ ಗುರು ಪರ ಘೋಷಣೆಗಳನ್ನು ಕೂಗಿದ ಘಟನೆ ನಡೆದಿತ್ತು. ಈ ಸಂಬಂಧ ಈಗಾಗಲೇ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಸೇರಿಜದಂತೆ ಏಳು ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT