ತಮಿಳುನಾಡು ವಿಧಾನಸಭೆ ಚುನಾವಣೆ: ಕರುಣಾನಿಧಿ ಭೇಟಿ ಮಾಡಿದ ಕಾಂಗ್ರೆಸ್ ನ ಗುಲಾಂ ನಬಿ ಆಜಾದ್
ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಗುಲಾಂ ನಬೀ ಆಜಾದ್ ನೇತೃತ್ವದ ತಂಡ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ. ಕರುಣಾನಿಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದೆ....
ಚೆನ್ನೈ: ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಗುಲಾಂ ನಬೀ ಆಜಾದ್ ನೇತೃತ್ವದ ತಂಡ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ. ಕರುಣಾನಿಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದೆ.
ತಮಿಳುನಾಡಿನಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿ ಮಾಡಿಕೊಳ್ಳುವ ಸಂಬಂಧ ಸಮಾಲೋಚನೆ ನಡೆಸಲಾಗಿದೆ.
ತಮಿಳುನಾಡು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಇ.ವಿಕೆ. ಎಸ್ ಇಳಂಗೋವನ್ ಈ ವೇಳೆ ಉಪಸ್ಥಿತರಿದ್ದರು ಶ್ರೀಲಂಕಾದ ತಮಿಳಿಗರ ವಿಷಯ ಸಂಬಂಧ ಎರಡು ಪಕ್ಷಗಳ ನಡುವೆ ವಿರಸ ಏರ್ಪಟ್ಟಿತು. ಈಗ ಮೂರು ವರ್ಷಗಳ ನಂತರ ಮತ್ತೆ ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿ ಸಾಧ್ಯತೆ ದಟ್ಟವಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.