ಮನಮೋಹನ್ ಸಿಂಗ್ 
ದೇಶ

ದೇಶಕ್ಕೆ ಮನಮೋಹನ್ ಸಿಂಗ್ ಕೊಟ್ಟ ಗಿಫ್ಟ್ 'ಆರ್ಥಿಕ ಸಮಸ್ಯೆ': ಬಿಜೆಪಿ

ದೇಶಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕೊಟ್ಟ ಉಡುಗೊರೆ 'ಆರ್ಥಿಕ ಸಮಸ್ಯೆ' ಎಂದು...

ನವದೆಹಲಿ: ದೇಶಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕೊಟ್ಟ ಉಡುಗೊರೆ 'ಆರ್ಥಿಕ ಸಮಸ್ಯೆ' ಎಂದು ಬಿಜೆಪಿ ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಖಂಡಿಸಿದ ಮನಮೋಹನ್ ಸಿಂಗ್ ಅವರಿಗೆ ತಿರುಗೇಟು ನೀಡಿರುವ ಬಿಜೆಪಿ, ಆರ್ಥಿಕ ಸಮಸ್ಯೆಯೇ ದೇಶಕ್ಕೆ ಮನ್ ಮೋಹನ್ ಸಿಂಗ್ ಕೊಟ್ಟ ಉಡುಗೊರೆ ಎಂದು ಕಿಡಿ ಕಾರಿದೆ.
ಭಾರತ ಸಾಕಷ್ಟು ಆರ್ಥಿಕ ಸಮಸ್ಯೆ ಎದುರಿಸುತ್ತಿದೆ ಎಂದು ಅವರೇ ಹೇಳುತ್ತಿದ್ದಾರೆ. ಅಂತಹ ಆರ್ಥಿಕ ಸಮಸ್ಯೆಯನ್ನು ತಂದುಕೊಟ್ಟವರೇ ಮನಮೋಹನ್ ಸಿಂಗ್. ಯುಪಿಎ ತಂದಿಟ್ಟಿರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಎನ್ ಡಿಎ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ತಿಳಿಸಿದೆ.  
ಕೊನೆಗೂ ಮನಮೋಹನ್ ಸಿಂಗ್ ಅವರು ಮೋದಿ ಸರ್ಕಾರದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಇಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕಿದೆ. ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಅವರು ಕೇವಲ ಒಂದು ಕುಟುಂಬಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ, ದೇಶಕ್ಕಾಗಲ್ಲ ಎಂದು ಬಿಜೆಪಿ ಆರೋಪಿಸಿದೆ. 
ಉದ್ಯಮಿಗಳು ಸರ್ಕಾರದ ಸಚಿವರೊಂದಿಗೆ ಚರ್ಚೆ ನಡೆಸುತ್ತಿರುವಾಗ ಎಲ್ಲವೂ ಸರಿಯಾಗಿದೆ ಎಂದು ಹೇಳುತ್ತಾರೆ, ಆದರೆ ಹೊರಗೆ ಬಂದ ಬಳಿಕ ಏನೂ ಬದಲಾವಣೆ ಆಗಿಲ್ಲ ಎಂದು ಹೇಳಿಕೆ ನೀಡುತ್ತಾರೆ. ಇದರಿಂದ ತಿಳಿಯುತ್ತದೆ ಕೇಂದ್ರ ಸರ್ಕಾರದಲ್ಲಿ ವಿಶ್ವಾಸದ ಕೊರತೆ ಇದೆ ಎಂದು ಸಂದರ್ಶನವೊಂದರಲ್ಲಿ ಮನಮೋಹನ್ ಸಿಂಗ್ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!