ರಾಹುಲ್ ಗಾಂಧಿ 
ದೇಶ

ಜೆಎನ್ ಯುಗೆ ರಾಹುಲ್ ಗಾಂಧಿ ಭೇಟಿ, ಎಬಿವಿಪಿಯಿಂದ ಕಪ್ಪು ಭಾವುಟ ಪ್ರದರ್ಶನ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಜವಾಹರ್‍ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‍ಯು)ಕ್ಕೆ ಭೇಟಿ ನೀಡಿ, ಅಲ್ಲಿ ಜೆಎನ್ ಯು ವಿದ್ಯಾರ್ಥಿ...

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಜವಾಹರ್‍ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‍ಯು)ಕ್ಕೆ ಭೇಟಿ ನೀಡಿ, ಅಲ್ಲಿ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಅವರ ಬಂಧನ ವಿರೋಧಿಸಿ ವಿದ್ಯಾರ್ಥಿ ಸಂಘ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಈ ವೇಳೆ ಎಬಿವಿಪಿ ಕಾರ್ಯಕರ್ತರು ರಾಹುಲ್ ಗಾಂಧಿಗೆ ಕಪ್ಪು ಭಾವುಟ ಪ್ರರ್ದಶಿಸಿ, ಗೋ ಬ್ಯಾಕ್ ರಾಹುಲ್ ಗಾಂಧಿ ಎಂದು ಘೋಷಣೆ ಕೂಗಿದರು.
ಬಳಿಕ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತ ವಿರೋಧಿ ಭಾವನೆ ಪ್ರಶ್ನಾತೀತ ಮತ್ತು ಸ್ವೀಕಾರಾರ್ಹವಲ್ಲ. ಆದರೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದು ಮತ್ತು ಚರ್ಚೆ ಮಾಡುವುದು ಪ್ರಜಾಪ್ರಭುತ್ವದ ಮೂಲ ಹಕ್ಕುಗಳು. ಮೋದಿ ಸರ್ಕಾರ ಮತ್ತು ಎಬಿವಿಪಿ ಅನಗತ್ಯವಾಗಿ ಜೆಎನ್​ಯುು ಮೇಲೆ ದೋಷಾರೋಪ ಹೊರಿಸುತ್ತಿದ್ದು, ಇದು ಖಂಡನೀಯ ಎಂದು ರಾಹುಲ್ ಗಾಂಧಿ ಹೇಳಿದರು.
ರಾಹುಲ್ ಜತೆ ಕಾಂಗ್ರೆಸ್ ನಾಯಕರಾದ ಅಜಯ್ ಮಕಾನ್ ಮತ್ತು ಆನಂದ ಶರ್ಮಾ ಜೆಎನ್​ಯುು ಕಾಲೇಜಿಗೆ ಭೇಟಿ ನೀಡಿದರು.
ಜೆಎನ್​ಯುು ಪ್ರಕರಣದ ಕುರಿತು ತನಿಖೆ ನಡೆಸುವಂತೆ ದೆಹಲಿ ಸರ್ಕಾರ ಸ್ಥಳೀಯ ಕೋರ್ಟ್​ಗೆ ಮನವಿ ಮಾಡಿದೆ. ಗಲ್ಲು ಶಿಕ್ಷೆಯಲ್ಲಿ ಸತ್ತ ಉಗ್ರ ಅಫ್ಜಲ್ ಹಾಗೂ ಪಾಕಿಸ್ತಾನ ಪರ ಘೊಷಣೆ ಕೂಗಿದ್ದಕ್ಕಾಗಿ ರಾಷ್ಟ್ರದ್ರೋಹ ಪ್ರಕರಣದಡಿ ಜೆಎನ್​ಯುು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್​ನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!