ಕಿರಣ್ ರಿಜಿಜು 
ದೇಶ

ಜೆಎನ್ ಯು ರಾಷ್ಟ್ರ ವಿರೋಧಿ ಕೃತ್ಯಗಳ ತಾಣವಾಗಲು ಬಿಡಲ್ಲ: ಕಿರಣ್ ರಿಜಿಜು

ಜವಾಹರ್‍ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‍ಯು)ದ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದು, ಒಂದು ಶೈಕ್ಷಣಿಕ ಸಂಸ್ಥೆ ರಾಷ್ಟ್ರ ವಿರೋಧಿಗಳ ತಾಣವಾಗಲು...

ನವದೆಹಲಿ: ಜವಾಹರ್‍ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‍ಯು)ದ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದು, ಒಂದು ಶೈಕ್ಷಣಿಕ ಸಂಸ್ಥೆ ರಾಷ್ಟ್ರ ವಿರೋಧಿಗಳ ತಾಣವಾಗಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಶನಿವಾರ ಹೇಳಿದ್ದಾರೆ.
ದೇಶದ್ರೋಹದ ಆರೋಪದ ಮೇಲೆ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷನನ್ನು ಬಂಧಿಸಿದ ಮಾರನೇ ದಿನ ವರದಿಗಾರರಿಗೆ ಪ್ರತಿಕ್ರಿಯಿಸದ ಕಿರಣ್ ರಿಜಿಜು, ಜೆಎನ್ ಯು ರಾಷ್ಟ್ರ ವಿರೋಧಿ ಕೃತ್ಯಗಳ ತಾಣವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಸಂಪೂರ್ಣ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಅದಕ್ಕೂ ಕೆಲವು ಇತಿ, ಮಿತಿಗಳಿವೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಅಲ್ಲದೆ ದೇಶ ವಿರೋಧಿ ಘೋಷಣೆ ದುರದೃಷ್ಟಕರ. ಆದರೆ ಅವರು ಚಿಕ್ಕಮಕ್ಕಳಲ್ಲ ಎಂದು ರಿಜಿಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಫೆಬ್ರವರಿ 9ರಂದು ವಿವಿಯಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ವೇಳೆ ಕೆಲವು ವಿದ್ಯಾರ್ಥಿಗಳು ಅಫ್ಜಲ್ ಗುರು ಪರ ಘೋಷಣೆಗಳನ್ನು ಕೂಗಿದ ಘಟನೆ ನಡೆದಿತ್ತು. ಈ ಸಂಬಂಧ ಈಗಾಗಲೇ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಸೇರಿಜದಂತೆ ಏಳು ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!