ಮುಂಬೈ: ಮೇಕ್ ಇನ್ ಇಂಡಿಯಾ ಸಪ್ತಾಹ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ವೇದಿಕೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ.
ಮುಂಬೈನ ಬಾಂದ್ರಾ-ಕುರ್ಲಾದ ಎಂಎಂಆರ್ಡಿಎ ಮೈದಾನದಲ್ಲಿ ನಡೆಯುತ್ತಿದ್ದ ಮೇಕ್ ಇನ್ ಇಂಡಿಯಾ ಸಪ್ತಾಹ ಸಮಾರಂಭದ ಹಿನ್ನೆಲೆ ಇಂದು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿತ್ತು. ಸ್ಟೇಜ್ ಮೇಲೆ ಕಲಾವಿರದರು ನೃತ್ಯ ಪ್ರದರ್ಶನ ಮಾಡುತ್ತಿದ್ದ ವೇಳೆ ಸ್ಟೇಜ್ ಕೆಳಗೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಭದ್ರತಾ ಸಿಬ್ಬಂದಿಗಳು ಸ್ಟೇಜ್ ಮೇಲಿದ್ದ ಕಲಾವಿದರನ್ನು ಕೆಳಗಿಳಿಯುಂತೆ ಸೂಚಿಸಿದ್ದಾರೆ. ಇದರಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಸ್ಟೇಜ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, 20 ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬಾಲಿವುಡ್ ಗಣ್ಯರು, ಮಹಾರಾಷ್ಟ್ರ ಮುಖ್ಯಮಂತ್ರಿ ಸೇರಿದಂತೆ ಹಲವು ದೇಶದ ಪ್ರಧಾನಿಗಳು ಭಾಗಿಯಾಗಿದ್ದರು.