ಅತ್ಯಾಚಾರ ಆರೋಪ: ಆರ್ ಜೆಡಿ ಶಾಸಕನ ವಿರುದ್ಧ ಬಂಧನಾದೇಶ ಜಾರಿ 
ದೇಶ

ಅತ್ಯಾಚಾರ ಆರೋಪ: ಆರ್ ಜೆಡಿ ಶಾಸಕನ ವಿರುದ್ಧ ಬಂಧನಾದೇಶ ಜಾರಿ

ಅಪ್ರಾಪ್ತ ಬಾಲಕಿಯೊಬ್ಬಳ ಮೇಲಿನ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಆರ್ ಜೆಡಿ ಶಾಸಕ ರಾಜ್ ಬಲ್ಲಭ್ ಯಾದವ್ ವಿರುದ್ಧ ಅಲ್ಲಿನ ಸರ್ಕಾರ ಬಂಧನಾದೇಶ ಜಾರಿಗೊಳಿಸಿದೆ ಎಂದು ಹೇಳಲಾಗುತ್ತಿದೆ...

ಪಾಟ್ನಾ: ಅಪ್ರಾಪ್ತ ಬಾಲಕಿಯೊಬ್ಬಳ ಮೇಲಿನ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಆರ್ ಜೆಡಿ ಶಾಸಕ ರಾಜ್ ಬಲ್ಲಭ್ ಯಾದವ್ ವಿರುದ್ಧ ಅಲ್ಲಿನ ಸರ್ಕಾರ ಬಂಧನಾದೇಶ ಜಾರಿಗೊಳಿಸಿದೆ ಎಂದು ಹೇಳಲಾಗುತ್ತಿದೆ. 
ನವಾಡ ಮೂಲಕ 15 ವರ್ಷದ ಬಾಲಕಿಯೊಬ್ಬಳು ಫೆ.6ರಂದು ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಆರೋಪಿಸಿ ದೂರೊಂದನ್ನು ದಾಖಲಿಸಿದ್ದಳು. ಇದರಂತೆ ತನಿಖೆ ನಡೆಸಿದ್ದ ಪೊಲೀಸರು ಬಾಲಕಿ ನೀಡಿದ ಮಾಹಿತಿ ಆಧಾರದ ಮೇಲೆ ಶಾಸಕ ರಾಜ್ ಬಲ್ಲಭ್ ಯಾದವ್ ಅವರ ಫೋಟೋವನ್ನು ಬಾಲಕಿಗೆ ತೋರಿಸಿದ್ದರು. ಈ ವೇಳೆ ಬಾಲಕಿ ಶಾಸಕನೇ ಅತ್ಯಾಚಾರ ಮಾಡಿದ್ದ ಎಂದು ಆರೋಪಿಸಿದ್ದಳು. 
ಇದರಂತೆ ಇದೀಗ ಐಪಿಸಿ ಸೆಕ್ಷನ್ 164ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಶಾಸಕರ ವಿರುದ್ಧ ಬಂಧನಾದೇಶವನ್ನು ಹೊರಡಿಸಲಾಗಿದೆ ಎಂದು ಡಿಐಜಿ ಮಾಹಿತಿ ನೀಡಿದ್ದಾರೆ. 
ರಾಜ್ ಬಲ್ಲಭ್ ಯಾದವ್ ಅವರು ನವಾಡ ಕ್ಷೇತ್ರದಿಂದ ಆರ್ ಜೆಡಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಹಿಂದೆ ಆರ್ ಜೆಡಿ ಸರ್ಕಾರದಲ್ಲಿ ಸಚಿವರೂ ಆಗಿ ಕಾರ್ಯನಿರ್ವಹಿಸಿದ್ದರು. ಇದೀಗ ಅವರ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಈ ಬಗ್ಗೆ ಈವರೆಗೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!

ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾದಲ್ಲಿ ಅಂತ್ಯ; WTC ಪಾಯಿಂಟ್ಸ್‌ ಟೇಬಲ್‌ನಲ್ಲಿ ಟೀಂ ಇಂಡಿಯಾಗೆ ಭಾರೀ ಹೊಡೆತ!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್