ಜೆಎನ್ಯು ವಿವಾದ: ಸೀತಾರಾಂ ಯೆಚೂರಿಗೆ ಬೆದರಿಕೆ ಕರೆ
ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರಿಗೆ ಆಮ್ ಆದ್ಮಿ ಸೇನೆಯಿಂದ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗುತ್ತಿದೆ. ಜೆಎನ್ಯು ವಿದ್ಯಾರ್ಥಿ...
ನವದೆಹಲಿ: ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರಿಗೆ ಆಮ್ ಆದ್ಮಿ ಸೇನೆಯಿಂದ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗುತ್ತಿದೆ. ಜೆಎನ್ಯು ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯನ್ನು ಬೆಂಬಲಿಸಿದ್ದಕ್ಕಾಗಿ ಯೆಚೂರಿಯವರಿಗೆ ಬೆದರಿಕೆ ಕರೆ ಬಂದಿದೆ. ಭಾನುವಾರ ರಾತ್ರಿ 10.30ರಿಂದ 1 ಗಂಟೆಯ ನಡುವಿನ ಅವಧಿಯಲ್ಲಿ ಈ ಕರೆಗಳು ಬಂದಿವೆ ಎಂದು ಸಿಪಿಐಎಂ ಕಚೇರಿಯ ನೌಕರ ದೀಪಕ್ ಕುಮಾರ್ ಹೇಳಿದ್ದಾರೆ.
ಯೆಚೂರಿ ಮಾಡಿದ್ದು ತಪ್ಪು, ಅವರಿಗೆ ಈ ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಬೆದರಿಕೆ ಕರೆಯಲ್ಲಿ ಹೇಳಲಾಗಿತ್ತು. ಕರೆ ಮಾಡಿದ ವ್ಯಕ್ತಿ ತಾನು ಆಮ್ ಆದ್ಮಿ ಬಾಲ್ವೀರ್ ಸೇನೆಯ ಸದಸ್ಯ ಎಂದು ಹೇಳಿರುವುದಾಗಿ ದೀಪಕ್ ಹೇಳಿಕೆ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಿಪಿಎಂ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಬೆದರಿಕೆ ಕರೆ ಹಿನ್ನಲೆಯಲ್ಲಿ ಎಕೆಜಿ ಭವನದ ಸುತ್ತಲೂ ಬಿಗಿಭದ್ರತೆ ಏರ್ಪಡಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.