ದೇಶ

ಜೆಎನ್ ಯು ವಿವಾದ: ಪತ್ರಕರ್ತರ ಮೇಲೆ ದಾಳಿ ಮಾಡಿದ್ದ ವಕೀಲರ ವಿರುದ್ಧ ಎಫ್ ಐಆರ್

Srinivasamurthy VN

ನವದೆಹಲಿ: ಜೆಎನ್ ಯು ವಿವಾದಕ್ಕೆ ಸಂಬಂಧಿಸಿದಂತೆ ಪತ್ರಕರ್ತರ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಮಂಗಳವಾರ ಪೊಲೀಸರು ಹಲವು ವಕೀಲರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ದೆಹಲಿ ಪೊಲೀಸ್ ಆಯುಕ್ತ ಬಿಎಸ್ ಬಸ್ಸಿ ಅವರು, ಪತ್ರಕರ್ತರ ಮೇಲಿನ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ಈಗಾಗಲೇ  ಹಲವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. 69ನೇ ರೈಸಿಂಗ್ ಡೇ ಆಫ್ ದೆಹಲಿ ಪೊಲೀಸ್ ದಿನದ ಅಂಗವಾಗಿ ದೆಹಲಿಯಲ್ಲಿ ನಡೆದ  ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಪ್ರಕರಣ ಸಂಬಂಧ ತನಿಖೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಇನ್ನು ಜೆಎನ್ ಯು ವಿವಾದ ಸಂಬಂಧ ಪಾಟಿಯಾಲ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಕೆಲ ಜೆಎನ್ ಯು ವಿವಿಯ ವಿದ್ಯಾರ್ಥಿಗಳು ಮತ್ತು ಕೆಲ ವಕೀಲರು ಪತ್ರಕರ್ತರ  ಮೇಲೆ ಹಲ್ಲೆ ಮಾಡಿದ್ದರು. ಭಾರತ ಮಾತಾಕಿ ಜೈ ಎಂದು ಘೋಷಣೆ ಕೂಗಿದ ವಕೀಲರು ಏಕಾಏಕಿ ನಾಲ್ಕು ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ವಕೀಲರ ವಿರುದ್ಧ ದೂರು  ದಾಖಲಾಗಿತ್ತು.

SCROLL FOR NEXT