ಶೀನಾ ಬೋರಾ ಹತ್ಯೆ ಪ್ರಕರಣ: ಪೀಟರ್ ಮುಖರ್ಜಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಶೀನಾಬೋರಾ ಹತ್ಯೆ ಪ್ರಕರಣದಲ್ಲಿ ಉದ್ಯಮಿ ಪೀಟರ್ ಮುಖರ್ಜಿ ವಿರುದ್ಧ ಕೊಲೆ ಸಂಚು ರೂಪಿಸಿದ ಆರೋಪ ಹೊರಿಸಿ ಸಿಬಿಐ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದೆ...
ಮುಂಬೈ: ಶೀನಾಬೋರಾ ಹತ್ಯೆ ಪ್ರಕರಣದಲ್ಲಿ ಉದ್ಯಮಿ ಪೀಟರ್ ಮುಖರ್ಜಿ ವಿರುದ್ಧ ಕೊಲೆ, ಸಾಕ್ಷ್ಯಾಧಾರ ನಾಶ ಮತ್ತು ಕ್ರಿಮಿನಲ್ ಸಂಚು ರೂಪಿಸಿದ ಆರೋಪ ಹೊರಿಸಿ ಸಿಬಿಐ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದೆ. 2009 ರಿಂದ ಶೀನಾ ಬೋರಾ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಈ ಸಂಚಿನಲ್ಲಿ ಪೀಟರ್ ಮುಖರ್ಜಿ ಕೂಡ ಭಾಗಿಯಾಗಿದ್ದರು ಎಂದು ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಮಾಹಿತಿ ಬಹಿರಂಗವಾಗಿದೆ.
ಪೀಟರ್ ಮುಖರ್ಜಿ ವಿರುದ್ಧ ಸಿಬಿಐ ಸೆಷನ್ ಕೋರ್ಟ್ ಗೆ ಪೂರಕ ಚಾರ್ಜ್ಶೀಟ್ ಸಲ್ಲಿಸಿದೆ. ಚಾರ್ಜ್ಶೀಟ್ನಲ್ಲಿ ಶೀನಾಬೋರಾ ಹತ್ಯೆ ಪ್ರಕರಣದಲ್ಲಿ ಪೀಟರ್ ಪಾತ್ರ ಹಾಗೂ ಹಣಕಾಸು ವ್ಯವಹಾರಗಳ ಕುರಿತು ಮಾಹಿತಿ ಒದಗಿಸಲಾಗಿದೆ.
ಈ ಪ್ರಕರಣದಲ್ಲಿ ಮೊದಲ ಆರೋಪಿ ಪೀಟರ್ ಮುಖರ್ಜಿ ಪತ್ನಿ ಇಂದ್ರಾಣಿ ಮುಖರ್ಜಿ ಆಗಿದ್ದು, ಆರ್ಥರ್ ರೋಡ್ ಜೈಲಿನಲ್ಲಿ ಬಂಧಿಯಾಗಿರುವ ಪೀಟರ್ ಮುಖರ್ಜಿಯನ್ನು ಕಳೆದ ಎರಡು ವಾರದಿಂದ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. 2012ರಲ್ಲಿ ಶೀನಾ ಬೋರಾ (24) ದೇಹ ರಾಯಗಢ ಜಿಲ್ಲೆಯ ಕಾಡಲ್ಲಿ ಸುಟ್ಟ ಸ್ಥಿತಿಯಲ್ಲಿ ಕಾಣಿಸಿಕೊಂಡಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.