ಗುಂಡು ಹಾರಿಸಿಕೊಂಡು ಸಿಐಎಸ್ಎಫ್ ಅಧಿಕಾರಿ ಆತ್ಮಹತ್ಯೆ 
ದೇಶ

ಗುಂಡು ಹಾರಿಸಿಕೊಂಡು ಸಿಐಎಸ್ಎಫ್ ಅಧಿಕಾರಿ ಆತ್ಮಹತ್ಯೆ

ದೆಹಲಿ ವಿಮಾನ ನಿಲ್ದಾಣದ ಸಿಐಎಸ್ಎಫ್ ಅಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ...

ನವದೆಹಲಿ; ದೆಹಲಿ ವಿಮಾನ ನಿಲ್ದಾಣದ ಸಿಐಎಸ್ಎಫ್ ಅಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. 
ರಾಜ್ ಸಿಂಗ್ (58) ಆತ್ಮಹತ್ಯೆ ಮಾಡಿಕೊಂಡ ಸಿಐಎಸ್ಎಫ್ ಅಧಿಕಾರಿಯಾಗಿದ್ದು, ಇವರು ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಶಿಬಿರದಲ್ಲಿ ರಾಜ್ ಸಿಂಗ್ ಅವರಿಗೆ ನಿನ್ನೆ ರಾತ್ರಿ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಸೇವೆಗಾಗಿ ಶಸ್ತ್ರಾಸ್ತ್ರವನ್ನು ನೀಡಲಾಗಿತ್ತು. ಶಸ್ತ್ರಾಸ್ತ್ರ ನೀಡುತ್ತಿದ್ದಂತೆ ಶಿಬಿರದಲ್ಲಿಯೇ ರಾಜ್ ಸಿಂಗ್ ಇದ್ದಕ್ಕಿದ್ದಂತೆ ಗುಂಡು ಹಾರಿಸಿಕೊಂಡ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
ರಾಜ್ ಸಿಂಗ್ ಅವರ ದೇಹಕ್ಕೆ ಮೂರು ಗುಂಡುಗಳು ಹೊಕ್ಕ ಕಾರಣ ತೀವ್ರ ರಕ್ತಸ್ರಾವವಾಗಿದೆ. ನಂತರ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸಿಐಎಸ್ಎಫ್ ಮತ್ತು ದೆಹಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ. 
ಘಟನೆಯೊಂದು ಆತ್ಮಹತ್ಯೆ ಪ್ರಕರಣವೆಂದು ಮೇಲ್ನೋಟಕ್ಕೆ ಕಾಣುತ್ತಿದೆ. ಘಟನೆ ಪ್ರಮುಖ ಕಾರಣದ ಕುರಿತಂತೆ ತನಿಖೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ನ್ಯಾಯಾಲಯ ತನಿಖೆಗೆ ಆದೇಶಿಸಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್