ಅರವಿಂದ್ ಕೇಜ್ರಿವಾಲ್ 
ದೇಶ

ಹನುಮಾನ್ ಕಾರ್ಟೂನ್ ಟ್ವೀಟ್: ಕೇಜ್ರಿವಾಲ್ ವಿರುದ್ಧ ದೂರು

ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹ ಹನುಮಂತನ ಚಿತ್ರ ಇರುವ ಪೋಸ್ಟರ್ ಒಂದನ್ನು ಟ್ವೀಟ್ ಮಾಡಿ ದೆಹಲಿ ಮುಖ್ಯಮಂತ್ರಿ...

ನವದೆಹಲಿ: ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹ ಹನುಮಂತನ ಚಿತ್ರ ಇರುವ ಪೋಸ್ಟರ್ ಒಂದನ್ನು ಟ್ವೀಟ್ ಮಾಡಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿವಾದಕ್ಕೆ ಸಿಲುಕಿದ್ದಾರೆ.
ಹನುಮಂತನ ಚಿತ್ರ ಇರುವ ಪೋಸ್ಟರ್ ಟ್ವೀಟ್ ಮಾಡಿದ ಹಿನ್ನಲೆಯಲ್ಲಿ ಅರವಿಂದ್ ಕೇಜ್ರಿವಾಲ್ ವಿರುದ್ಧ ದೂರು ದಾಖಲಾಗಿದೆ. ಭಾರತೀಯ ಜನತಾ ಪಕ್ಷದ ಪರ ವಕೀಲ ಕೆ ಕರುಣಾ ಸಾಗರ್ ಅರವಿಂದ್ ಕೇಜ್ರಿವಾಲ್ ವಿರುದ್ಧ ದೂರು ನೀಡಿದ್ದಾರೆ. ಕೇಜ್ರಿವಾಲ್ ಅವರು ಟ್ವೀಟ್ ಮಾಡಿರುವ ವ್ಯಂಗ್ಯಚಿತ್ರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತದ್ದು, ಹಾಗಾಗಿ, ಕೇಜ್ರಿವಾಲ್ ವಿರುದ್ಧ ಇಂಡಿಯನ್ ಪೆನಲ್ ಕೋಡ್ ಸೆಕ್ಷನ್ 295ಎ ಮತ್ತು 153ಎ ಅಡಿ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ. 
ಹನುಮಂತ ಲಂಕೆಗೆ ಬೆಂಕಿ ಹಚ್ಚಿ ಬರುವಂತಹ ದೃಶ್ಯವನ್ನು ಇಟ್ಟುಕೊಂಡು ವ್ಯಂಗ್ಯ ಚಿತ್ರ ರಚಿಸಲಾಗಿದೆ. ಇದರಲ್ಲಿ "ಎಲ್ಲ ಕೆಲಸ ಮಾಡಿ ಮುಗಿಸಿದ್ದೇನೆ ಸರ್, ಈಗ ಎಲ್ಲರ ಚಿತ್ತ ಜೆಎನ್ ಯು ಕಡೆ ನೆಟ್ಟಿದೆ("Done Sir, all attention is on JNU now" ). ಈ ಗಲಾಟೆಯಲ್ಲಿ ಉಳಿದ ವಿಚಾರಗಳು ಯಾರ ತಲೆಗೂ ಹೋಗುವುದಿಲ್ಲ ಎಂಬ ಮಾತನ್ನು ಪ್ರತಿಬಿಂಬಿಸುತ್ತಿದ್ದು, ಮೇಕ್ ಇನ್ ಇಂಡಿಯಾ ಎದುರಿಗೆ ನಿಂತಿರುವ ಪ್ರಧಾನಿ ನರೇಂದ್ರ ಮೋದಿ ಎದುರು ಬರುವ ಹನುಮಂತನ ವೇಷದ ರಾಕ್ಷಸ ಹೇಳುವಂತೆ ಚಿತ್ರವೊಂದನ್ನು ರಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ