ಜೆಎನ್ ಯು ವಿವಿಯಲ್ಲಿರುವ ಪರ್ಯಾಯ, ರಚನಾತ್ಮಕ ಧ್ವನಿ ಕೇಳಲು ಕೇಂದ್ರ ಸಿದ್ಧವಿದೆ: ರವಿಶಂಕರ್ ಪ್ರಸಾದ್
ಜೆಎನ್ ಯು ವಿವಿಯ ರಚನಾತ್ಮಕ ಘೋಷಣೆಗಳಿಗೆ ಕಿವಿಗೊಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ನವದೆಹಲಿ: ಜೆಎನ್ ಯು ವಿಶ್ವವಿದ್ಯಾನಿಲಯದಲ್ಲಿ ದೇಶವಿರೋಧಿ ಘೋಷಣೆ ಕೂಗಿದ ವಿವಾದದ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಜೆಎನ್ ಯು ವಿವಿಯ ರಚನಾತ್ಮಕ ಘೋಷಣೆಗಳಿಗೆ ಕಿವಿಗೊಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.
ಭಾರತದ ಪ್ರಧಾನ ಶಿಕ್ಷಣಸಂಸ್ಥೆಯಾಗಿರುವ ಜೆಎನ್ ಯು ವಿಶ್ವವಿದ್ಯಾನಿಲಯದಲ್ಲಿ ರಚನಾತ್ಮಕ, ಪರ್ಯಾಯವಾದ ಧ್ವನಿಯೊಂದಿಗೆ ಅದನ್ನು ಕೇಳಲು ಕಾತುರದಿಂದಿದ್ದೇವೆ, ಜೆಎನ್ ಯು ವಿಶ್ವವಿದ್ಯಾನಿಲಯ ಶ್ರೇಷ್ಠ ಅಧಿಕಾರಿಗಳನ್ನು, ಶಿಕ್ಷಣಾ ತಜ್ಞರನ್ನು ತಯಾರು ಮಾಡಿದೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎನ್ನಲಾದ ಜೆಎನ್ ಯು ವಿವಿ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಕೈಗೊಂಡಿರುವ ಕ್ರಮವನ್ನು ರವಿಶಂಕರ್ ಪ್ರಸಾದ್ ಸಮರ್ಥಿಸಿಕೊಂಡಿದ್ದು ಕೇಂದ್ರ ಸರ್ಕಾರ ದೇಶವಿರೋಧಿ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.