ಸುಪ್ರೀಂ ಕೋರ್ಟ್ 
ದೇಶ

ಸರ್ದಾರ್ ಜೋಕ್ ತಡೆ: ಮಾರ್ಗಸೂಚಿಗೆ ಸುಪ್ರೀಂ ಕೋರ್ಟ್ ನಿರ್ಧಾರ

ಸರ್ದಾರ್ ಜೋಕ್ ಗಳು ಸಿಖ್ ಜನಾಂಗೀಯ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹಿನ್ನಲೆಯಲ್ಲಿ ಇದನ್ನು ತಡೆಯಲು...

ನವದೆಹಲಿ: ಸರ್ದಾರ್ ಜೋಕ್ ಗಳು ಸಿಖ್ ಜನಾಂಗೀಯ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹಿನ್ನಲೆಯಲ್ಲಿ ಇದನ್ನು ತಡೆಯಲು ಕೆಲವು ಮಾರ್ಗಸೂಚಿ ಜಾರಿಗೆ ತರಲು ಸುಪ್ರೀಂಕೋರ್ಟ್ ನಿರ್ಧರಿಸಿದೆ. 
ಸರ್ದಾರ್‌  ಜೋಕ್‌ಗಳನ್ನು ನಿಷೇಧಿಸಿ ಎಂದು ದೆಹಲಿಯ ಗುರುದ್ವಾರ ಸಮಿತಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್  ಅವರನ್ನೊಳಗೊಂಡ ಪೀಠ, ಜನಾಂಗೀಯ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿರುವ ‘ಸರ್ದಾರ್‌  ಜೋಕ್‌’ಗಳು  ಅಂತರ್ಜಾಲದಲ್ಲಿ ಹರಡದಂತೆ ತಡೆಯಲು ಕೆಲವು ಮಾರ್ಗಸೂಚಿ ಜಾರಿಗೆ ತರಲಾಗುವುದು ಎಂದು ಹೇಳಿದೆ. ಅಲ್ಲದೇ, ಅಗತ್ಯ ಮಾರ್ಗಸೂಚಿಗಳನ್ನು ಸಲ್ಲಿಸಲು ಅದನ್ನು ಪ್ರತಿನಿಧಿಸುವ ವಕೀಲರಾದ ಆರ್‌.ಎಸ್.ಸೂರಿ ಹಾಗೂ ಎಪಿಎಸ್ ಅಹ್ಲುವಾಲಿಯಾ ಅವರಿಗೆ ನ್ಯಾಯಪೀಠ ಸೂಚಿಸಿದೆ.
ನ್ಯಾಯಾಂಗದೊಳಗೆ ಯಾವ್ಯಾವ ಕ್ರಮ ಕೈಗೊಳ್ಳಲು ಸಾಧ್ಯವಿದೆಯೋ ಅದನ್ನು ಕೈಗೊಳ್ಳಲು ಸಿದ್ಧ. ಆದರೆ, ಸರ್ದಾರ್ ಜೋಕ್ ಗಳನ್ನು ಹರಡಬೇಡಿ ಎಂದರೇ ಅದು ಸಾಧ್ಯವೇ? ಅಥವಾ ನಿಮ್ಮ ಸಹೋದ್ಯೋಗಿಗಳೇ ಹಾಸ್ಯ ಮಾಡುವುದನ್ನು ತಪ್ಪಿಸಲು ಸಾಧ್ಯವಾಗುತ್ತದೇಯೇ? ಎಂದು ಪ್ರಶ್ನಿಸಿದ ನ್ಯಾಯಾಮೂರ್ತಿಗಳು, ಆದರೆ, ಇದನ್ನು ತಡೆಯಲು ಕೆಲ ಮಾರ್ಗಸೂಚಿಗಳನ್ನು ತರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!