ದೇಶ

ಗೋವಾ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆ: ದಿಗ್ವಿಜಯ್ ಸಿಂಗ್

Shilpa D

ಪಣಜಿ: ಮುಂಬರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಗಳೊಂದಿಗೂ ಮೈತ್ರಿ ಮಾಡಿಕೊಳ್ಳದೇ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಗೋವಾ ರಾಜ್ಯದ 40 ವಿಧಾನ ಸಭಾ ಕ್ಷೇತ್ರಗಳಲ್ಲೂ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿರುವ ಕಾಂಗ್ರೆಸ್, ಯಾವುದೇ ಪಕ್ಷದ ಜೊತೆ ಮೈತ್ರಿ ಅಥವಾ ಬಾಹ್ಯ ಹೊಂದಾಣಿಕೆ ಮಾಡಿಕೊಡುವುದಿಲ್ಲ ಎಂದು ದಿಗ್ವಿಜಯ್ ಸಿಂಗ್ ಮಾಧ್ಯಮಗಳಿಗೆ ಹೇಳಿದ್ದಾರೆ.

2017ರ ಮಾರ್ಚ್ ನಲ್ಲಿ ಚುನಾವಣೆ ನಡೆಯಲ್ಲಿದ್ದು, ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸಲಾಗುವುದು ಎಂದು ಅವರು ಹೇಳಿದ್ದಾರೆ.  ಬಿಜೆಪಿ ನೇತೃತ್ವದ ಗೋವಾ ಸರ್ಕಾರದ ವೈಫಲ್ಯತೆಗಳನ್ನು ಪಟ್ಟಿ ಮಾಡುತ್ತಿರುವುದಾಗಿ  ಅವರು ತಿಳಿಸಿದರು.

SCROLL FOR NEXT