ನವದೆಹಲಿ: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದ ದೇಶ ವಿರೋಧಿ ಘೋಷಣೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಸುದ್ದಿ ವಾಹಿನಿಯೊಂದರ ವಿಡಿಯೋ ಆಧರಿಸಿ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಿಸಲಾಗಿದೆ ಎಂಬ ಮಾಹಿತಿ ಹೊರ ಬಿದ್ದಿದೆ.
ಎಫ್ಐಆರ್ ಪ್ರಕಾರ, ಪೊಲೀಸರು ಸ್ಥಳದಲ್ಲಿದ್ದರೂ ಜೆಎನ್ ಯು ವಿವಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಫೆ.9ರಂದು ಪ್ರಸಾರವಾದ ಹಿಂದಿ ಸುದ್ದಿ ವಾಹಿನಿಯೊಂದರ ವಿಡಿಯೋ ಕ್ಲಿಪ್ ಅನ್ನು ದೆಹಲಿ ಪೊಲೀಸರು ಕನಹ್ಯ ಕುಮಾರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.
ವಿವಿಯಲ್ಲಿ ಎಡರಂಗದ ವಿದ್ಯಾರ್ಥಿಗಳು ಉಗ್ರ ಅಫ್ಜಲ್ ಗುರು ಗಲ್ಲಿಗೇರಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ದೇಶವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ದೆಹಲಿ ಪೊಲೀಸರು ಫೆ.12ರಂದು ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷನನ್ನು ಬಂಧಿಸಿದ್ದಾರೆ. ಆದರೆ ವಿವಿ ವಿದ್ಯಾರ್ಥಿಗಳು ಮಾತ್ರ ಕನ್ಹಯ್ಯ ಕುಮಾರ್ ಅವರು ಅಂತಹ ಯಾವುದೇ ಘೋಷಣೆ ಕೂಗಿಲ್ಲ ಎಂದು ಹೇಳುತ್ತಿದ್ದಾರೆ.
ಜೆಎನ್ ಯುನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳದಲ್ಲಿ ಮೂವರು ಪೊಲೀಸರನ್ನು ಮಫ್ತಿಯಲ್ಲಿ ನಿಯೋಜಿಸಲಾಗಿತ್ತು. ಆದರೆ ಅವರಿಂದ ಯಾವುದೇ ಮಾಹಿತಿ ಪಡೆಯದ ದೆಹಲಿ ಕೇವಲ ವಿಡಿಯೋ ಕ್ಲಿಪ್ ಅನ್ನು ಆಧರಿಸಿ ಫೆ.11ರಂದು ದೇಶ ದ್ರೋಹದ ಕೇಸ್ ದಾಖಲಿಸಿದ್ದಾರೆ.
ಎಫ್ಐಆರ್ ಪ್ರಕಾರ, ಪ್ರತಿಭಟನಾ ನಿರತ 80-90 ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ವಿಡಿಯೋ ಕ್ಲಿಪ್ ನಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics