ದೇಶ

ಕೇಂದ್ರೀಯ ವಿವಿಗಳಲ್ಲಿ ತ್ರಿವರ್ಣ ಧ್ವಜ ಹಾರಾಟಕ್ಕೆ ಸ್ಮತಿ ಇರಾನಿ ಆಜ್ಞೆ

Vishwanath S

ನವದೆಹಲಿ: ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಜಾಗೃತಿಗೊಳಿಸುವ ಉದ್ದೇಶದಿಂದಾಗಿ ದೇಶದ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಇನ್ನು ಮುಂದೆ ತ್ರಿವರ್ಣ ಧ್ವಜವನ್ನು ಹಾರಿಸಬೇಕು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮತಿ ಇರಾನಿ ಆಜ್ಞಾಪಿಸಿದ್ದಾರೆ.

ಸ್ಮತಿ ಇರಾನಿ ಅಧ್ಯಕ್ಷತೆಯಲ್ಲಿ ನಡೆದ ಎಲ್ಲ ಕೇಂದ್ರೀಯ ವಿಶ್ವವಿದ್ಯಾಲಯಗಳ 46 ವೈಸ್‌ ಚಾನ್ಸಲರ್‌ಗಳ ಸಭೆಯಲ್ಲಿ ಕೇಂದ್ರೀಯ ವಿವಿ ಕ್ಯಾಂಪಸ್‌ನಲ್ಲಿ 207 ಅಡಿ ಎತ್ತರದ ಸ್ತಂಭದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ನಿರ್ಧಾರವನ್ನು ಕೈಗೊಳ್ಳಲಾಯಿತು.

ದೇಶದ್ರೋಹಿ ಘೋಷಣೆಗಳನ್ನು ಕೂಗುವ ಮೂಲಕ ವಿವಾದಕ್ಕೆ ಕಾರಣವಾಗಿರುವ ಜವಾಹರ್‌ಲಾಲ್‌ ನೆಹರೂ ವಿವಿ ಆವರಣದಲ್ಲಿ ನಿರ್ಧಾರದ ಅನುಷ್ಠಾನದ ಮೊದಲ ಹೆಜ್ಜೆಯಾಗಿ ತ್ರಿವರ್ಣ ಧ್ವಜವನ್ನು ಹಾರಿಸಲಾಗುವುದು ಎಂದು ಮೂಲಗಳು ಹೇಳಿವೆ.

ದೆಹಲಿಯ ಜೆಎನ್‌ಯು ಕ್ಯಾಂಪಸ್‌ನಲ್ಲಿ ಈಚೆಗೆ ಅಫ್ಜಲ್‌ ಗುರು ಶ್ರದ್ಧಾಂಜಲಿ ಸಭೆ ನಡೆದ ಸಂದರ್ಭದಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಲಾದ ಘಟನೆಯಿಂದ ಇಡಿಯ ದೇಶವೇ ವಿಚಲಿತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿಯಲಾಗಿದೆ.

SCROLL FOR NEXT