ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಪಾಕ್ ಅಕ್ರಮಿತ ಕಾಶ್ಮೀರ ಸೇರಿದಂತೆ ಇಡೀ ಜಮ್ಮು- ಕಾಶ್ಮೀರ ಭಾರತದ ಅವಿಭಾಜ್ಯ ಅಂಗ: ಬ್ರಿಟನ್ ಸಂಸದ

ಪಾಕಿಸ್ತಾನ ಅಕ್ರಮವಾಗಿ ಭಾರತಕ್ಕೆ ಸೇರಿದ ಕಾಶ್ಮೀರ ಭಾಗವನ್ನು ಆಕ್ರಮಿಸಿಕೊಂಡಿದ್ದು, ನಿಜವಾಗಿಯೂ ಇಡೀ ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಬ್ರಿಟನ್ ಸಂಸದ ರಾಬರ್ಟ್ ಜಾನ್ ಬ್ಲಾಕ್‌ಮನ್..

ಬ್ರಿಟನ್ ಸಂಸದ ರಾಬರ್ಟ್ ಜಾನ್ ಬ್ಲಾಕ್‌ಮನ್ (ಸಂಗ್ರಹ ಚಿತ್ರ)
Srinivasa Murthy VN
Updated On : 18 Feb 2016, 11:40 am

ಶ್ರೀನಗರ: ಪಾಕಿಸ್ತಾನ ಅಕ್ರಮವಾಗಿ ಭಾರತಕ್ಕೆ ಸೇರಿದ ಕಾಶ್ಮೀರ ಭಾಗವನ್ನು ಆಕ್ರಮಿಸಿಕೊಂಡಿದ್ದು, ನಿಜವಾಗಿಯೂ ಇಡೀ ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಬ್ರಿಟನ್  ಸಂಸದ ರಾಬರ್ಟ್ ಜಾನ್ ಬ್ಲಾಕ್‌ಮನ್ ಹೇಳಿದ್ದಾರೆ.

ಜಮ್ಮುವಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಬರ್ಟ್ ಅವರು, ಜಮ್ಮು ಮತ್ತು ಕಾಶ್ಮೀರದ ಸಂಪೂರ್ಣ ಭಾಗ ಭಾರತದ ಅವಿಭಾಜ್ಯ ಅಂಗವಾಗಿದೆ. ಆ ಭಾಗ ಮೇಲೆ  ಭಾರತಕ್ಕೆ ಸಂಪೂರ್ಣ ಅಧಿಕಾರವಿದೆ. ಪಾಕಿಸ್ತಾನ ಸ್ವಯಂಪ್ರೇರಿತವಾಗಿ ಇದನ್ನು ಭಾರತಕ್ಕೆ ಬಿಟ್ಟುಕೊಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

"ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಬಿಕ್ಕಟ್ಟು ಶಾಶ್ವತವಾಗಿ ಪರಿಹಾರವಾಗಬೇಕು ಎಂದರೆ ಪಾಕಿಸ್ತಾನ ಆಕ್ರಮಿಸಿಕೊಂಡಿರುವ ಭಾರತದ ಕಾಶ್ಮೀರ ಪ್ರದೇಶವನ್ನು ಬಿಟ್ಟುಕೊಡಬೇಕು.  1947ಕ್ಕೂ ಮೊದಲು ಇದ್ಧಂತೆ ಎಲ್ಲ ರಾಜ್ಯಗಳು ಪ್ರಜಾಪ್ರಭುತ್ವ ಭಾರತದ ಅವಿಭಾಜ್ಯ ಅಂಗವಾಗಬೇಕು. ದಕ್ಷಿಣ ಏಷ್ಯಾದಲ್ಲಿ ಶಾಶ್ವತ ಶಾಂತಿ ನೆಲೆಸಲು ಇದೊಂದೇ ಪರಿಹಾರ ಎಂದು ರಾಬರ್ಟ್  ಹೇಳಿದ್ದಾರೆ.

1994 ಫೆಬ್ರವರಿ 22ರಂದು ಭಾರತ ಸಂಸತ್ತಿನಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಸೇರಿದಂತೆ ಇಡೀ ಜಮ್ಮು ಮತ್ತು ಕಾಶ್ಮೀರ ರಾಜ್ಯ ಭಾರತದ ಅವಿಭಾಜ್ಯ ಅಂಗ ಮತ್ತು ಇದನ್ನು ಯಾರಾದರೂ  ಭಾರತದಿಂದ ಕಿತ್ತುಕೊಳ್ಳಲು ಯತ್ನಿಸಿದರೆ ಅವರ ವಿರುದ್ಧ ಯಾವುದೇ ರೀತಿ ಪ್ರತಿರೋಧ ಒಡ್ಡಲು ಭಾರತ ಸಿದ್ಧ ಎಂದು ನಿರ್ಣಯ ಕೈಗೊಳ್ಳಲಾಗಿತ್ತು. ಅಲ್ಲದೆ ಅಕ್ರಮವಾಗಿ  ಆಕ್ರಮಿಸಿಕೊಳ್ಳಲಾಗಿರುವ ಜಮ್ಮು ಪ್ರದೇಶವನ್ನು ಪಾಕಿಸ್ತಾನ ಕೂಡಲೇ ಬಿಟ್ಟುಕೊಡಬೇಕು ಎಂಬ ನಿರ್ಣಯವನ್ನು ಅಂಗೀಕರಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments