ಟ್ವಿಟ್ಟರ್ ಯಡವಟ್ಟು 
ದೇಶ

ಜಮ್ಮು-ಕಾಶ್ಮೀರ ಚೀನಾ, ಪಾಕಿಸ್ತಾನದ ಭಾಗವಂತೆ: ಇದು ಟ್ವಿಟರ್ ಯಡವಟ್ಟು

ಖ್ಯಾತ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಜಮ್ಮು ಮತ್ತು ಕಾಶ್ಮೀರ ಭಾಗವನ್ನು ಪಾಕಿಸ್ತಾನ ಮತ್ತು ಚೀನಾಕ್ಕೆ ಸೇರಿಸಿದೆ...

ನವದೆಹಲಿ: ಜಮ್ಮು ಕಾಶ್ಮೀರ ಎಲ್ಲಿದೆ ಎಂದು ಯಾರಾದರೂ ಕೇಳಿದರೆ ಅದು ಭಾರತದ ಅವಿಭಾಜ್ಯ ಅಂಗ ಎಂದು ಪ್ರತಿಯೊಬ್ಬ ಭಾರತೀಯನೂ ಹೇಳುತ್ತಾನೆ. ಆದರೆ ಖ್ಯಾತ ಸಾಮಾಜಿಕ  ಜಾಲತಾಣ ಟ್ವಿಟ್ಟರ್ ಮಾತ್ರ ಜಮ್ಮು ಮತ್ತು ಕಾಶ್ಮೀರ ಭಾಗವನ್ನು ಪಾಕಿಸ್ತಾನ ಮತ್ತು ಚೀನಾ ಭೂಪಟಕ್ಕೆ ಸೇರಿಸಿದೆ.

ಟ್ವಿಟರ್ ಬಳಕೆದಾರರು ಟ್ವೀಟ್ ಕಂಪೋಸ್ ಮಾಡುವಾಗ ಲೊಕೇಷನ್ ಆಯ್ಕೆ ಮಾಡಿಕೊಳ್ಳುವ ಅವಕಾಶವಿರುತ್ತದೆ. ಆದರೆ ಇಲ್ಲಿ ಜಮ್ಮು ಮತ್ತು ಕಾಶ್ಮೀರ ಎಂದು ಟೈಪಿಸಿದರೆ ಅಲ್ಲಿ ಭಾರತದ  ಆಯ್ಕೆಯೇ ಬರುವುದಿಲ್ಲ. ಬದಲಿಗೆ ಚೀನಾ ಮತ್ತು ಪಾಕಿಸ್ತಾನ ಆಯ್ಕೆಗಳು ಬರುತ್ತವೆ. ಜಮ್ಮು, ಪಾಕಿಸ್ತಾನ ಮತ್ತು ಜಮ್ಮು ಮತ್ತು ಕಾಶ್ಮೀರ, ರಿಪಬ್ಲಿಕ್ ಆಫ್ ಚೀನಾ ಎಂಬ ಆಯ್ಕೆಗಳನ್ನು  ತೋರಿಸಲಾಗುತ್ತಿದೆ. ಟ್ವಿಟರ್ ಸಂಸ್ಥೆಯ ಈ ಯಡವಟ್ಟು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟೀಕೆಗೆ ಗುರಿಯಾಗಿದೆ.

ಇನ್ನು ತನ್ನ ಯಡವವಟ್ಟಿನ ಬಗ್ಗೆ ಟ್ವಿಟರ್ ಸಂಸ್ಥೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!