ಸಾಂದರ್ಭಿಕ ಚಿತ್ರ 
ದೇಶ

ಸದ್ಯದ ಪರಿಸ್ಥಿತಿಯಲ್ಲಿ ಬುಲೆಟ್ ರೈಲುಗಳ ಅವಶ್ಯಕತೆಯಿಲ್ಲ: ದೆಹಲಿ ಮೆಟ್ರೋ ಮಾಜಿ ಮುಖ್ಯಸ್ಥ ಡಾ.ಇ.ಶ್ರೀಧರನ್

ಸದ್ಯದ ಪರಿಸ್ಥಿತಿಯಲ್ಲಿ ಬುಲೆಟ್ ರೈಲುಗಳ ಅವಶ್ಯಕತೆಯಿಲ್ಲ. ಅದರ ಬದಲಾಗಿ ಭಾರತೀಯ ರೈಲ್ವೆ ರೈಲುಗಳಲ್ಲಿ ಈಗಿರುವ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವತ್ತ...

ನಾಗ್ಪುರ: ಸದ್ಯದ ಪರಿಸ್ಥಿತಿಯಲ್ಲಿ ಬುಲೆಟ್ ರೈಲುಗಳ ಅವಶ್ಯಕತೆಯಿಲ್ಲ. ಅದರ ಬದಲಾಗಿ ಭಾರತೀಯ ರೈಲ್ವೆ ರೈಲುಗಳಲ್ಲಿ ಈಗಿರುವ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸಬೇಕು ಎಂದು ದೆಹಲಿ ಮೆಟ್ರೋದ ಮಾಜಿ ಮುಖ್ಯಸ್ಥ ಡಾ.ಇ.ಶ್ರೀಧರನ್ ಹೇಳಿದ್ದಾರೆ.
ಬುಲೆಟ್ ರೈಲು ಸಂಚಾರ ಆರಂಭಿಸಲು ಇದು ಸರಿಯಾದ ಸಮಯವಲ್ಲ. ಆದರೆ ರೈಲುಗಳ ವ್ಯವಸ್ಥೆಯನ್ನು ಸುಧಾರಿಸುವ ಅಗತ್ಯವಿದೆ. ವೇಗ, ಮೂಲ ಸೌಕರ್ಯ ಮತ್ತು ಪ್ರಯಾಣಿಕರ ಸುಗಮ ಸಂಚಾರ ಅಭಿವೃದ್ಧಿಯಾಗಬೇಕು ಎಂದು 'ಮೆಟ್ರೋ ಮ್ಯಾನ್' ಎಂದು ಕರೆಯಲ್ಪಡುವ ಡಾ.ಶ್ರೀಧರನ್ ಹೇಳಿದ್ದಾರೆ. ಇನ್ನು 8-10 ವರ್ಷ ಕಳೆದ ನಂತರ ಮೆಟ್ರೋ ರೈಲು ಬೇಕಾಗಬಹುದು ಎಂದು ಅವರು ಅಭಿಪ್ರಾಯಪಟ್ಟರು.

98 ಸಾವಿರ ಕೋಟಿ ರೂಪಾಯಿ ಮೊತ್ತದ ಮುಂಬೈ-ಅಹಮದಾಬಾದ್ ನಡುವೆ ದೇಶದ ಮೊದಲ ಬುಲೆಟ್ ರೈಲು ಯೋಜನೆಗೆ ಕಳೆದ ವರ್ಷ ಡಿಸೆಂಬರ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಸೋ ಅಬೆ ಸಹಿ ಹಾಕಿದ್ದರು. ಬುಲೆಟ್ ರೈಲು ನಿರ್ಮಾಣಕ್ಕೆ ಭಾರತ ಜಪಾನ್ ನ ಸಹಕಾರವನ್ನು ಕೋರಿದೆ. 505 ಕಿಲೋ ಮೀಟರ್ ಉದ್ದದ ಮುಂಬೈ-ಅಹಮದಾಬಾದ್ ನಡುವಿನ ದೂರವನ್ನು ಬುಲೆಟ್ ರೈಲು ಸಹಾಯದಿಂದ 3 ಗಂಟೆಗಳಲ್ಲಿ ಕ್ರಮಿಸಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT