ವಿವಿಗಳಲ್ಲಿ ರಾಷ್ಟ್ರಧ್ವಜ ಹಾರಾಟಕ್ಕೆ ಸ್ಮೃತಿ ಆದೇಶ: ಎಎಪಿ ನಾಯಕ ಟೀಕೆ
ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ರಾಷ್ಟ್ರಧ್ವಜ ಹಾರಾಟ ಕಡ್ಡಾಯ ಎಂದು ಆದೇಶಿಸಿರುವ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ...
ನವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ರಾಷ್ಟ್ರಧ್ವಜ ಹಾರಾಟ ಕಡ್ಡಾಯ ಎಂದು ಆದೇಶಿಸಿರುವ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಕ್ರಮವನ್ನು ಆಮ್ ಆದ್ಮಿ ಪಕ್ಷದ ನಾಯಕ ಕಪಿಲ್ ಮಿಶ್ರಾ ಟೀಕಿಸಿದ್ದಾರೆ.
ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ರಾಷ್ಟ್ರಧ್ವಜ ಹಾರಾಟ ಕಡ್ಡಾಯಗೊಳಿಸಿರುವುದು ಒಳ್ಳೆಯದೇ, ಆದರೆ, ಜೆಎನ್ ಯುನಲ್ಲಿ ರಾಷ್ಟ್ರಧ್ವಜ ಹಾರಾಟ ಮಾಡಿದ ನಂತರ, ಕಾಶ್ಮೀರದ ವಿಶ್ವವಿದ್ಯಾಲಯದಲ್ಲಿ ಕೇಂದ್ರ ಸರ್ಕಾರ ರಾಷ್ಟ್ರಧ್ವಜ ಹಾರಾಟ ಮಾಡುತ್ತದಯೇ?, ಕೇಂದ್ರ ಸರ್ಕಾರ ಯಾವಾಗ ಎಲ್ಲಾ ರಾಷ್ಟ್ರ ವಿರೋಧಿಗಳನ್ನು ಬಂಧಿಸುತ್ತದೆ ಎಂದು ತಿಳಿದುಕೊಳ್ಳಬೇಕಿದೆ ಎಂದು ಕಪಿಲ್ ಮಿಶ್ರಾ ಟ್ವೀಟ್ ಮಾಡಿದ್ದಾರೆ.
ಜೆಎನ್ ಯು ಕೆಲ ವಿದ್ಯಾರ್ಥಿಗಳು ದೇಶ ವಿರೋಧಿ ಘೋಷಣೆಗಳು ಕೂಗಿ, ನಡೆಸಲಾಗುತ್ತಿರುವ ಪ್ರತಿಭಟನೆಗಳು ಹಾಗೂ ಹೈದ್ರಾಬಾದ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಮಾನವ ಸಂಪನ್ಮೂಲ ಸಚಿವರು ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳ ಸಭೆ ಕರೆದು, ಎಲ್ಲಾ 46 ಕೇಂದ್ರೀಯ ವಿಶ್ವವಿದ್ಯಾಲಯದ ಆಡಳಿತ ಕಚೇರಿ ತುತ್ತ ತುದಿ ಮೇಲೆ 207 ಅಡಿ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಿಸಬೇಕು ಎಂಬ ನಿರ್ಧಾರವನ್ನು ಕೈಗೊಂಡಿದ್ದರು.