ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಮ್ಮು-ಕಾಶ್ಮೀರ ಭಾರತದ ಆಂತರಿಕ ವಿಚಾರ: ಪಾಕ್'ಗೆ ತಿರುಗೇಟು ನೀಡಿದ ಭಾರತ

ಸಂಸತ್ ಮೇಲೆ ದಾಳಿ ನಡೆಸಿ, ಗಲ್ಲು ಶಿಕ್ಷೆಗೆ ಗುರಿಯಾದ ಉಗ್ರ ಅಫ್ಜಲ್ ಗುರು ಬಗ್ಗೆ ಇತ್ತೀಚೆಗಷ್ಟೇ ಪಾಕಿಸ್ತಾನ ನೀಡಿದ್ದ ಹೇಳಿಗೆ ಭಾರತ ತಿರುಗೇಟಿ ನೀಡಿದ್ದು, ಜಮ್ಮು ಮತ್ತು ಕಾಶ್ಮೀರ ಭಾರತದ ಆಂತರಿಕ ವಿಚಾರವಾಗಿದ್ದು...

ಜಮ್ಮು-ಕಾಶ್ಮೀರ ಭಾರತದ ಆಂತರಿಕ ವಿಚಾರ: ಪಾಕ್'ಗೆ ತಿರುಗೇಟು ನೀಡಿದ ಭಾರತ
Manjula VN
Updated On : 19 Feb 2016, 12:50 pm
ನವದೆಹಲಿ: ಸಂಸತ್ ಮೇಲೆ ದಾಳಿ ನಡೆಸಿ, ಗಲ್ಲು ಶಿಕ್ಷೆಗೆ ಗುರಿಯಾದ ಉಗ್ರ ಅಫ್ಜಲ್ ಗುರು ಬಗ್ಗೆ ಇತ್ತೀಚೆಗಷ್ಟೇ ಪಾಕಿಸ್ತಾನ ನೀಡಿದ್ದ ಹೇಳಿಗೆ ಭಾರತ ತಿರುಗೇಟಿ ನೀಡಿದ್ದು, ಜಮ್ಮು ಮತ್ತು ಕಾಶ್ಮೀರ ಭಾರತದ ಆಂತರಿಕ ವಿಚಾರವಾಗಿದ್ದು, ಜಮ್ಮು,ಕಾಶ್ಮೀರದ ಬಗ್ಗೆ ಪಾಕಿಸ್ತಾನ ನೀಡುವ ಅಸಂಬದ್ಧ ಹೇಳಿಕೆಯನ್ನು ಸ್ವೀಕರಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಭಾರತ ವಿದೇಶಾಂಗ ವ್ಯವಹಾರ ಇಲಾಖೆಯ ವಕ್ತಾರ ವಿಕಾಸ್ ಸ್ವರೂಪ್ ಅವರು, ಜಮ್ಮು ಮತ್ತು ಕಾಶ್ಮೀರ ಭಾರತದ ಆಂತರಿಕ ವಿಚಾರವಾಗಿದ್ದು, ಈ ಬಗ್ಗೆ ಪಾಕಿಸ್ತಾನ ನೀಡುವ ಅನಪೇಕ್ಷಿತ ಉಲ್ಲೇಖಗಳನ್ನು ಭಾರತ ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. 
ಈ ಹಿಂದೆ ಜೆಎನ್ ಯು ವಿವಾದಕ್ಕೆ ಸಂಬಂಧಿಸಿ ಪಾಕಿಸ್ತಾನ ಖಾಸಗಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪಾಕಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರ ಮಹಮ್ಮದೇ ನಫೀಸ್ ಝಕಾರಿಯಾ ಅವರು, ಭಾರತ ಸರ್ಕಾರ ಅಫ್ಜಲ್ ಗುರುವನ್ನು ವಿಚಾರಣೆ ನಡೆಸಿದ ರೀತಿಯನ್ನು ಕಾಶ್ಮೀರ ಜನತೆ ಎಂದು ಒಪ್ಪಿಕೊಳ್ಳುವುದಿಲ್ಲ. ಕಾಶ್ಮೀರ ಕಣಿವೆಯಲ್ಲಿ ಕಾಶ್ಮೀರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಪಾಕಿಸ್ತಾನ ಖಂಡಿಸುತ್ತದೆ. ಈ ಬಗ್ಗೆ ಪಾಕಿಸ್ತಾನ ಕಾಳಜಿಯನ್ನು ಹೊಂದಿದ್ದು, ವಿಚಾರವನ್ನು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಗಮನಕ್ಕೆ ತರಲಾಗುತ್ತದೆ ಎಂದು ಹೇಳಿದ್ದರು. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments